ಸಂಚಾರಿ ವಿಜಯ್ ಇನ್ನಿಲ್ಲ

Share

ಬೈಕ್ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ.
ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಅಫಘಾತ ಸಂಭವಿಸಿತ್ತು ಈ ವೇಳೆ ಅವರ ತೆಲೆಗೆ ಪೆಟ್ಟು ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯೆಗೊಂಡಿತ್ತು, ತೀವ್ರ ಗಾಯಗೊಂಡಿದ್ದ ಅವರನ್ನು ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಹಲವಾರು ಕನ್ನಡ ಚಿತ್ರ ಮತ್ತು ಕಿರುಚಿತ್ರ ಹಾಗೂ ನಾಟಕ ಗೀಳು ಹತ್ತಿಸಿಕೊಂಡಿದ್ದ ಅವರಿಗೆ ಎರಡು ಬಾರಿ ರಾಷ್ಟ್ರಪ್ರಶಸ್ತಿ ಬಂದಿತ್ತು ನಾನಲ್ಲ ಅವಳು ಎನ್ನುವ ಕನ್ನಡ ಚಿತ್ರದ ಮನೋಜ್ಞ ಅಭಿನಯ ಮಾಡಿದ್ದ ಅವರು ಎಲ್ಲರಿಂದಲೂ ಪ್ರಶಂಸೆಗೆ ಒಳಗಾಗಿದ್ದರು.
ಅಲ್ಲದೆ ಸಾಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದ ಅವರು ಕೊರೊನಾ ಸಂದರ್ಭದಲ್ಲಿ ಹಲವಾರು ಮಂದಿಗೆ ಕಿಟ್ ಸೇರಿದಂತೆ ಇತರೆ ವಸ್ತುಗಳನ್ನು ಹಂಚಿದ್ದರು.

ಅಂಗಾಂಗ ದಾನ ಮಾಡಲು ನಿರ್ಧಾರ


ವೈದ್ಯರು ಹೇಳುವ ಪ್ರಕಾರ ಅವರ ಪ್ರಾಣ ಹೋದ ಮೇಲೆ ಅಂಗಾಗಳನ್ನು ದಾನ ಮಾಡಲು ಸಾಧ್ಯವಿಲ್ಲ. ಸಾಮಾಜಿ ಕಳಕಳಿಗಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ಅವರ ದೇಹದ ಇತರ ಭಾಗಗಳು ಬೇರೆಯವರಿಗೆ ಸಹಾಯವಾಗಲಿ ಎನ್ನುವುದ ನಮ್ಮ ಉದ್ದೇಶವಾಗಿದೆ. ನನಗೆ ಮಾತನಾಡಲು ಶಕ್ತಿ ಇಲ್ಲ. ಸರ್ಕಾರ ನಮಗೆ ಸಹಾಯ ಮಾಡಿದೆ. ಅಶ್ವಥ್ ನಾರಾಯಣ ಅವರು ನಮಗೆ ಸಹಾಯವನ್ನು ಮಾಡಿದ್ದಾರೆ. ನಮಗೆ ಈ ಸಂದರ್ಭದಲ್ಲಿ ಧರ್ಯವನ್ನು ನೀಡಿದ್ದಾರೆ ಎಂದು ಹೇಳುತ್ತಾ ಅವರ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು.


ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡು ಕೋಮಾದಲ್ಲಿರುವ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದಾರೆ. ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ ೩೬ ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. ೩೬ ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟವಾಗಿದೆ ಎಂದು ಹೇಳಿದರು.
ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಸಂಚಾರಿ ವಿಜಯ್ ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಸ್ಥಳೀಯರು ಅವರನ್ನು ಬನ್ನೇರುಘಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ಯ ನಟ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾದಲ್ಲಿದ್ದಾರೆ.

Girl in a jacket
error: Content is protected !!