ಬೆಂಗಳೂರು, ಜೂ,19:ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ.
ಈ ಮೂಲಕ ಕರ್ನಾಟಕಕ್ಕೆ ಮುನ್ನಡೆಯಾಗಿದ್ದಯ ಶೀಘ್ರ ಕಾಮಗಾರಿ ಸಲ್ಲಿಸಲು ಸರ್ಕಾರ ಯೋಜನೆ ರೂಪಿಸಲು ತಯಾರಿ ನಡೆಸಿದೆ.
ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದೆ.
“ಜಲಾಶಯ ನಿರ್ಮಾಣ ವಿವಾದ ಸುಪ್ರೀಂಕೋರ್ಟ್ ಮುಂದೆ ಬಾಕಿ ಇದೆ ಮತ್ತು ಅರಣ್ಯ ಇಲಾಖೆಯ ಅನುಮತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ಬಾಕಿ ಇರುವುದರಿಂದ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ಇಂದು ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.