ಪ್ರತಿಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಿಸುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಿಸುವ ಕುರಿತು ಇಂದು ನಡೆದ ಸಭೆಯಲ್ಲಿ ಕೂಡಲೇ ನೀರು ಒದಗಿಸುವಂತೆ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ.
ಬೆಂಗಳೂರು, ಜೂ.೨೨: ಜಲಜೀವನ್ ಮಿಷನ್ ಯೋಜನೆಯಡಿ ೨೫ಲಕ್ಷ ಗ್ರಾಮೀಣಭಾಗದ ಮನೆಗಳಿಗೆ ಕುಡಿಯುವ ನೀರು ಬದಗಿಸುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ೯೧.೯೧ ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ ೨೮ ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. ೨೦೨೧-೨೨ರಲ್ಲಿ ೨೫.೧೭ ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಸಾಸುವಂತೆ ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಈ ವರೆಗೆ ೪೩೫ ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. ೬೯ ಯೋಜನೆಗಳು ಪ್ರಗತಿಯಲ್ಲಿದ್ದು, ೩೦ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ೨೦೨೧-೨೨ನೇ ಸಾಲಿನಲ್ಲಿ ೧೬೧ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಕಾರಿಗಳು ಮಾಹಿತಿ ನೀಡಿದರು.
ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಯೋಜನೆ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ. ಈ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಕಾರಿಗಳೊಂದಿಗೆ ವಿಡಿಯೊ ಕಾನರೆನ್ಸ್ ನಡೆಸುವುದಾಗಿ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಇತರ ಅಕಾರಿಗಳು ಇದ್ದರು.