ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

Share

ಹುಬ್ಬಳ್ಳಿ,ಜು,೧೨: ಇಲ್ಲಿನ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್‌ನಾರಾಯಣ ಅವರು ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು
ಹುಬ್ಬಳ್ಳಿ ಪ್ರವಾಸದಲ್ಲಿರುವ ಅವರು ಇಲ್ಲಿನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.
ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಹಾಲ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ಕ್ಕೆ ಸಂಬಂಧಿಸಿದಂತೆ ಶಿಕ್ಷಣ ತಜ್ಞರೊಂದಿಗಿನ ಚರ್ಚೆಯಲ್ಲಿ ಪಾಲ್ಗೊಳ್ಳುವರು.
ಬೆಳಗ್ಗೆ ೧೦.೩೦ಕ್ಕೆ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ಬಳ್ಳಾರಿ ಜಿಲ್ಲೆಯ ಶಾಲೆಗಳಿಗೆ ಕೋವಿಡ್ ೧೯ರ ಕಿಟ್‌ಗಳನ್ನು ಪೂರೈಸುವ ವಾಹನಗಳಿಗೆ ಚಾಲನೆ ನೀಡುವರು. ಬೆಳಗ್ಗೆ ೧೧.೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಯುನಿವರ್ಸಿಟಿ ಸೈಂಟಿಫಿಕ್ ಇನ್‌ಸ್ಟ್ರುಮೆಂಟೆನೇಷನ್ ಸೆಂಟರ್ (ಯುಎಸ್‌ಐಸಿ) ಗೆ ಭೇಟಿ ನೀಡುವರು. ಮಧ್ಯಾಹ್ನ ೧೨.೩೦ಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಕ್ಕೆ, ಮಧ್ಯಾಹ್ನ ೩.೧೫ಕ್ಕೆ ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್ ಹಾಗೂ ಸಂಜೆ ೫.೩೦ಕ್ಕೆ ನಗರದ ಐಟಿ ಪಾರ್ಕ್‌ಗೆ ಭೇಟಿ ನೀಡುವರು. ಸಂಜೆ ೭ ಗಂಟೆಗೆ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Girl in a jacket
error: Content is protected !!