ಜುಲೈ 19 ರಿಂದ ಸಂಸತ್ ಅಧಿವೇಶನ

Share

ನವದೆಹಲಿ,ಜು,12: ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 19ರಿಂದ ಆರಂಭವಾಗಲಿದೆ ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಸೋಮವಾರ ಮಾಹಿತಿ ನೀಡಿದ್ದಾರೆ.

19 ದಿನಗಳ ಕಾಲ ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್‌ 13ಕ್ಕೆ ಅಂತ್ಯಗೊಳ್ಳಲಿದೆ ಎಂದು ಬಿರ್ಲಾ ತಿಳಿಸಿದ್ದಾರೆ.

ಸಾಮಾನ್ಯವಾಗಿ ಮುಂಗಾರು ಅಧಿವೇಶನವು ಜುಲೈ ಮೂರನೇ ವಾರದಲ್ಲಿ ಆರಂಭವಾಗಿ, ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಕೊನೆಗೊಳ್ಳುವುದು ವಾಡಿಕೆ. ಆದರೆ, ಈ ಬಾರಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸಿನ ಮೇಲೆ ಅಧಿವೇಶನದ ಅವಧಿಯನ್ನು ನಿಗದಿಪಡಿಸಲಾಗಿದೆ.

ಅಧಿವೇಶನದ ಅವಧಿಯಲ್ಲಿ ಕೋವಿಡ್‌ ಸಂಬಂಧಿತ ಎಲ್ಲ ಮಾರ್ಗ ಸೂಚಿಗಳನ್ನು ಪಾಲಿಸಲು ಸಂಸತ್ತಿನ ಆವರಣವನ್ನು ಸಿದ್ಧಗೊಳಿಸಲಾಗಿದೆ.

Girl in a jacket
error: Content is protected !!