ಹಾಡುಹಗಲೇ ಬ್ಯಾಂಕಿಗೆ ನುಗ್ಗಿ ರೌಡಿ ಹತ್ಯೆ

Share

ಬೆಂಗಳೂರು, ಜು.19:ಪತ್ನಿಯ ಜೊತೆಗೆ ಬ್ಯಾಂಕ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಮಾಡಿದ ಘಟನೆ ಹಾಡುಹಗಲೆ ನಡೆದಿದೆ.

ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ ಯೂನಿಯನ್ ಬ್ಯಾಂಕ್ ನಲ್ಲಿ ರೌಡಿ ಬಬ್ಲು ಮತ್ತು ಆತನ ಪತ್ನಿ ವ್ಯವಹಾರ ನಡೆಸುತ್ತಿದ್ದಾಗ ಈ ಕೃತ್ಯ ಜರುಗಿದೆ ಅಂತ ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಪತ್ನಿ ಜತೆ ಕೋರಮಂಗಲ 8ನೆ ಬ್ಲಾಕ್‍ನಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆ (ಕಾಪೆರ್ರೇಷನ್ ಬ್ಯಾಂಕ್)ಗೆ ಬಬ್ಲು ಬಂದಿದ್ದನು. ಆತನನ್ನು ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಬ್ಯಾಂಕ್‍ನೊಳಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಪರಿಶೀಲನೆ ನಡೆಸಿ ಬ್ಯಾಂಕ್ ಬಳಿಯ ಸಿಸಿ ಟಿವಿಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಕೊಲೆ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

Girl in a jacket
error: Content is protected !!