ದ್ವಿತೀಯ ಪಿಯು ಫಲಿತಾಂಶ ಪ್ರಕಟ;ದ.ಕ.ಜಿಲ್ಲೆ ಪ್ರಥಮಸ್ಥಾನ

Share

ಬೆಂಗಳೂರು,ಜು,೨೦:ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಫಿಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮಸ್ಥಾನ ಗಳಿಸಿಕೊಂಡಿದೆ.

ಪ್ರಾಥಮಿಮಿ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು,.ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೪,೫೦,೭೦೬ ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ೧,೪೭,೦೫೬ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ೬೮,೭೨೯ ವಿದ್ಯಾರ್ಥಿಗಳು ಜಸ್ಟ್ ಪಾಸಾಗಿದ್ದಾರೆ. ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿದೆ ಎಂದರು.
ಎಸ್ ಎಸ್ ಎಲ್ ಸಿ ಅಂಕಗಳಲ್ಲಿ ಶೇ. ೪೫ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯ ಶೇ.೪೫ ಹಾಗೂ ಆಂತರಿಕ ಮೌಲ್ಯಮಾಪನದ ಶೇ. ೧೦ ರಷ್ಟು ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ೬,೬೬,೪೯೭ ವಿದ್ಯಾರ್ಥಿಗಳಿದ್ದರು. ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.
೯೫,೬೨೮ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೩,೫೫,೦೭೮ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ೧,೪೭,೦೫೫ ದ್ವಿತೀಯ ದರ್ಜೆ ಹಾಗೂ ೬೮,೭೨೯ ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.

೬೦೦ಕ್ಕೆ ೬೦೦ ಅಂಕ ಪಡೆದ ವಿದ್ಯಾರ್ಥಿಗಳು:

ದಕ್ಷಿಣ ಕನ್ನಡ ಜಿಲ್ಲೆ ೪೪೫, ಬೆಂಗಳೂರು ದಕ್ಷಿಣ ೩೦೨, ಬೆಂಗಳೂರು ಉತ್ತರ ೨೬೧, ಉಡುಪಿ ೧೪೯, ಹಾಸನ ೧೦೪ ವಿದ್ಯಾರ್ಥಿಗಳು ೬೦೦ಕ್ಕೆ ೬೦೦ ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗ-೨,೫೧,೬೮೬, ವಿಜ್ಞಾನ, ೨,೧೯,೭೭೭, ಕಲಾ ವಿಭಾಗದಲ್ಲಿ ೧,೯೫,೩೦೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಫಲಿತಾಂಶ ತಿರಸ್ಕರಿಸುವ ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಜುಲೈ ೩೦ ರೊಳಗೆ ಹೆಸರು ನೋಂದಾಯಿಸಬೇಕು. ಈ ವಿದ್ಯಾರ್ಥಿಗಳಿಗೆ ಆಗಸ್ಟ್ ೧೯ ರಿಂದ ಸೆಪ್ಟೆಂಬರ್ ೩ ರೊಳಗೆ ಪರೀಕ್ಷೆ ನಡೆಸಲಾಗುವುದು ಎಂದರು.

Girl in a jacket
error: Content is protected !!