ಶಾಸಕ ಜಮೀರ್ ಅಹಮದ್ ಮನೆ ಮೇಲೆ ಐಟಿ ದಾಳಿ

Share

ಬೆಂಗಳೂರು,ಆ,05:ಇಂದು ಬೆಳಂಬೆಳಿಗ್ಗೆ ಶಾಸಕ ಜಮೀರ್ ಅಹಮದ್ ಮನೆ ಮೇಲೆ ಐಟಿ ದಾಳಿ ಮಾಡಲಾಗಿದೆ.ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.

ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಫ್ಲಾಟ್ ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಆದಾಯ ವಿವರ, ಹೂಡಿಕೆ, ಸಂಪಾದನೆ, ಆಸ್ತಿ ಮೊದಲಾದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

Girl in a jacket
error: Content is protected !!