ಬೆಂಗಳೂರು,ಆ,16: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.
ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು. ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ನಿರ್ಮಿಸಿದ್ದಾರೆ. ಇನ್ನು ಬಿ.ಎಸ್.ಯಡಿಯೂರಪ್ಪನವರ ಸಮಯದಲ್ಲಿ ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಸದ್ಯ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.