ಆಲಮಟ್ಟಿ ಡ್ಯಾಂಗೆ ಸಿಎಂ ಬೊಮ್ಮಾಯಿ ಅವರಿಂದ ಬಾಗಿನ

Share

ಆಲಮಟ್ಟಿ,ಆ,21:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರ ಕರ್ನಾಟಕದ ಜೀವ ನದಿ ಎನಿಸಿರುವ ಕೃಷ್ಣಾ ನದಿಗೆ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು. ಆಲಮಟ್ಟಿಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಪಿ.ಸಿ. ಗದ್ದಿಗೌಡರ,ಶಾಸಕ ವೀರಣ್ಣ ಚರಂತಿಮಠ, ಶಾಸಕರಾದ ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಾಹಪೂರ, ಶಿವಾನಂದ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.

Girl in a jacket
error: Content is protected !!