ಕಾಂಗ್ರೆಸ್ ನನ್ನ ರೇಪ್ ಮಾಡ್ತಿದೆ ,ವಿವದಾತ್ಮಕ ಹೇಳಿಕೆ ನೀಡಿದ ಗೃಹಸಚಿವರು

Share

ಬೆಂಗಳೂರು,ಆ,26: ಮೈಸೂರಿನಲ್ಲಿ ವಿದ್ಯಾರ್ಥಿನಿ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಗೆ ಗೃಹಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನನ್ನ ರೇಪ್ ಮಾಡ್ತಿದೆ ಎಂದು ವಿವದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಕುರತಂತೆ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯಿಂದ ಗುರುವಾರ ಟ್ವೀಟ್‌ ಮಾಡಿದ್ದು ‘ಕಾಂಗ್ರೆಸ್‌ನವರು ನನ್ನನ್ನು ರೇಪ್ ಮಾಡುತ್ತಿದ್ದಾರೆ’ ಎಂಬ ಗೃಹಸಚಿವರ ಹೇಳಿಕೆ ಅವರ ಅಸಹಾಯಕತೆ, ಅದಕ್ಷತೆ, ಅಯೋಗ್ಯತನ ಹಾಗೂ ವೈಫಲ್ಯವನ್ನು ಒಪ್ಪಿಕೊಂಡಂತಿದೆ ಎಂದು ಟೀಕಿಸಲಾಗಿದೆ.

ಮಂತ್ರಿ ಸ್ಥಾನ ಪಡೆಯಲು ಲಾಭಿ ನಡೆಸುವುದಷ್ಟೇ ಅಲ್ಲ, ಪಡೆದ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ಯೋಗ್ಯತೆಯೂ ಇರಬೇಕು. ಅನರ್ಹರು ಆಳಲು ಬಂದರೆ ಹೀಗೆಯೇ ನಡೆದುಕೊಳ್ಳುತ್ತಾರೆ’ ಎಂದು ವ್ಯಂಗ್ಯವಾಡಲಾಗಿದೆ.

ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿತ್ತು. ಈ ಕುರಿತು ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು, ‘ ರೇಪ್‌ ಆಗಿರುವುದು ಅಲ್ಲಿ. ಆದರೆ, ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್‌ ಮಾಡುತ್ತಿದ್ದಾರೆ. ಎಲ್ಲೋ ಏನೋ ನಡೆಯುತ್ತದೆ. ಅದನ್ನು ಮಾನವೀಯ ನೆಲೆಯಲ್ಲಿ ಪರಿಶೀಲಿಸಿ, ತನಿಖೆ ನಡೆಸಿ ಎಂದು ಹೇಳುವುದನ್ನು ಬಿಟ್ಟು ರಾಜಕೀಯ ಮಾಡಿದರೆ ಅದನ್ನು ಜನ ತೀರ್ಮಾನ ಮಾಡುತ್ತಾರೆ. ಇಂಥ ಕೃತ್ಯಗಳನ್ನು ತಡೆಯಲು ಏನು ಮಾಡಬೇಕೋ ಅದನ್ನು ಪೊಲೀಸ್‌ ಇಲಾಖೆ ಮಾಡುತ್ತಿದೆ’ ಎಂದು ಅವರು ಹೇಳಿದ್ದಾರೆ.

‘ನಿರ್ಜನ ಪ್ರದೇಶದಲ್ಲಿ ರಾತ್ರಿ 7.30ರಲ್ಲಿ ಕೃತ್ಯ ನಡೆದಿದೆ. ಅಲ್ಲಿಗೆ ಅವರು ಹೋಗಬಾರದಿತ್ತು. ಆದರೆ, ಯಾರನ್ನೂ ನಾವು ತಡೆಯಲು ಸಾಧ್ಯವಿಲ್ಲ ಎಂದಿದ್ದಸರೆ.

Girl in a jacket
error: Content is protected !!