ದಾವಣಗೆರೆ,ಸೆ,೧೯: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಶಾಸಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವವ ಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‌ವೈ ತಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ನಿರಂತವಾಗಿ ನಡೆಯುತತಿದೆ ಆದರೆ ಯಾರು ಅವರ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮುಂದಿನ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ತವಕದಲ್ಲಿರುವ ಡಿಕೆಶಿ ಇತರೆ ಪಕ್ಷದ ಶಾಸಕರನ್ನು ಸೆಳೆಯುವ ಯತ್ನ ನಡೆಸುತ್ತಿದದಾರೆ. ಆದರೆ ಯಾರೂ ಆ ಪಕ್ಷದತ್ತ ಹೋಗುವುದಿಲ್ಲ ಎಂದು ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ವಿರುದ್ಧ ಬಿಎಸ್ ವೈ ಹೊಸ ಬಾಂಬ್
Share