ಅಮೃತಸರ್, ಸೆ, 19: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಭಾನುವಾರ ನಡೆಸಿದ ಚರ್ಚೆಯಲ್ಲಿ ಬಹುಪಾಲು ಕಾಂಗ್ರೆಸ್ ಶಾಸಕರು ಇವರ ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು. ಇದರ ಮಧ್ಯೆಯೂ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿ ಹೆಸರನ್ನು ಅಂತಿಮಗೊಳಿಸಲಾಗಿದೆ.
ನವದೆಹಲಿಯಲ್ಲಿ ಎಐಸಿಸಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ನಾಯಕಿ ಅಂಬಿಕಾ ಸೋನಿ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಈ ವೇಳೆ ಪಂಜಾಬ್ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಕಾಂಗ್ರೆಸ್ ಶಾಸಕರು ಒಮ್ಮತದಿಂದ ಒಂದು ಹೆಸರನ್ನು ಸೂಚಿಸಿದ ಹಿನ್ನೆಲೆಯಲ್ಲಿ ಸುಖ್ ಜಿಂದರ್ ರಾಂಧವ ಆಯ್ಕೆ ಮಾಡಿರುವುದಾಗಿ ತಿಳಿದ್ದರು.
ರಾಜ್ಯದ ಬಹುಪಾಲು ಕಾಂಗ್ರೆಸ್ ಶಾಸಕರು ಮುಂದಿನ ಸಿಎಂ ಸ್ಥಾನಕ್ಕೆ ಸುಖ್ ಜಿಂದರ್ ರಾಂಧವ ಹೆಸರನ್ನೇ ಘೋಷಿಸಲಿದ್ದಾರೆ ಎಂದು ಎದುರು ನೋಡುತ್ತಿದ್ದರು. ಆದರೆ ಹೈಕಮಾಂಡ್ ನಾಯಕರು ತೆಗೆದುಕೊಂಡ ಅಚ್ಚರಿಯ ತೀರ್ಮಾನದ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ. ಚರಂಜಿತ್ ಸಿಂಗ್ ಚನ್ನಿ ಪಂಜಾಬಿನ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.