ಬೆಂಗಳೂರು,ಸೆ,28: ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.
ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂದಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಉದಾಸಿ ಅವರ ಪುತ್ರ ಸಂಸದರಾದ ಶಿವಕುಮಾರ ಉದಾಸಿ ಅವರನನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ.
ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಬಹುತೇಕ ಅವರೇ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಕಾರ್ಯತಂತ್ರ ರೂಪಿಸಿದೆ. ಇವರೆಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ.