ಆನೇಕಲ್, ಅ,23 ಇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಅತ್ತಿಬೆಲೆ- ಟಿವಿಎಸ್ ರಸ್ತೆಯಲ್ಲಿ ತಡರಾತ್ರಿಯಲ್ಲಿ ನಡೆದಿದೆ.
ಕೊಲೆಯಾದವರನ್ನು ಅತ್ತಿಬೆಲೆಯ ದೀಪಕ್ ಹಾಗೂ ಮಾಯಸಂದ್ರದ ಬಾಸ್ಕರ್ ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಗಲಾಟೆ ನಡೆದು ಮತ್ತೊಂದು ಕಡೆಯವರು ಈ ಇಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಯಾದವರುಈ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತದೇಹಗಳ ಪಕ್ಕದಲ್ಲಿ ಎರಡು ಬೈಕ್ಗಳು ಪತ್ತೆಯಾಗಿವೆ.