ಬೆಳಗಾವಿ,ಡಿ,14: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.
ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಒಂದು ದಿನದ ಮಟ್ಟಿಗೆ ಅಮಾನತು ಮಾಡಿದ್ದಾರೆ.
ಸಿಎಂ ಇಬ್ರಾಹಿಂ, ಪಿಆರ್ ರಮೇಶ್, ಪ್ರತಾಪ್ ಚಂದ್ರ ಶೆಟ್ಟಿ, ಎಸ್ ಆರ್ ಪಾಟೀಲ್, ಪಿಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ 14 ಮಂದಿಯನ್ನು ಅಮಾನತು ಮಾಡಲಾಗಿದೆ.