ಮಾಸ್ಕೋ, ಫೆ, 24: ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿದ್ದಾರೆ. ಉಕ್ರೇನ್‌ನಲ್ಲಿ ಐದು ಬಾರಿ ಸ್ಫೋಟಕ ಶಬ್ದ ಕೇಳಿಬಂದಿದೆ.
ರಷ್ಯಾ ಜೊತೆಗಿನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಉಕ್ರೇನ್ ಸರ್ಕಾರ ಪೂರ್ವ ಉಕ್ರೇನ್ ನಲ್ಲಿ ವಿಮಾನ ನಿಲ್ದಾಣಗಳನ್ನು ಮಧ್ಯರಾತ್ರಿಯಿಂದ ಮುಚ್ಚಿದೆ.
ರಷ್ಯಾದ ವಾಯುಯಾನ ಅಧಿಕಾರಿಗಳು ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು “ಅಪಾಯಕಾರಿ ಪ್ರದೇಶಗಳು” ಎಂದು ಘೋಷಿಸಿದ್ದಾರೆ.
ಪುಟಿನ್ ಭೇಟಿಯಾದ ಖಾನ್: ಪಾಕಿಸ್ತಾನಕ್ಕೆ ಅಮೆರಿಕಾ ಎಚ್ಚರಿಕೆ ಸಂದೇಶ ಪುಟಿನ್ ಭೇಟಿಯಾದ ಖಾನ್: ಪಾಕಿಸ್ತಾನಕ್ಕೆ ಅಮೆರಿಕಾ ಎಚ್ಚರಿಕೆ ಸಂದೇಶ
ಕಳೆದ ವಾರ, ಇಲ್ಲಿನ ಪೈಲಟ್ ಗೆ ಎಚ್ಚರಿಕೆ ನೀಡಿದ್ದ ಉಕ್ರೇನ್ ವಾಯುಯಾನ ಅಧಿಕಾರಿಗಳು ವಾಯುಯಾನ ಪ್ರದೇಶಗಳ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿರುವ ರಷ್ಯಾ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿರಿಸುವಂತೆ ಮತ್ತು ಉಕ್ರೇನ್ ನ ನಿಯಂತ್ರಕರನ್ನು ಮಾತ್ರ ಗುರುತಿಸುವಂತೆ ಎಚ್ಚರಿಕೆ ನೀಡಿದ್ದರು.
ರಷ್ಯಾದ ಕಡೆಯಿಂದ ಯುದ್ಧದ ಬೆದರಿಕೆ ಹೆಚ್ಚಾಗುತ್ತಿರುವಂತೆ ಉಕ್ರೇನ್‌ನ ಅಧ್ಯಕ್ಷ ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿಕೊಂಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಮನವಿಯನ್ನು ಒಪ್ಪಿಕೊಳ್ಳಲಿಕ್ಕಿಲ್ಲ ಎಂದು ಹೇಳಿದ್ದಾರೆ.
ನಿನ್ನೆ ತಡರಾತ್ರಿ ಉಕ್ರೇನಿನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದೇಶದ ಜನತೆಯನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿ, ದೇಶವು ರಷ್ಯಾಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂಬ ರಷ್ಯಾ ಆರೋಪವನ್ನು ನಿರಾಕರಿಸಿದರು, ರಷ್ಯಾದ ಆಕ್ರಮಣವು ಹತ್ತಾರು ಸಾವಿರ ಜೀವಗಳನ್ನು ಕಳೆದುಕೊಳ್ಳುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.
ಉಕ್ರೇನ್ ಮೇಲೆ ಆಕ್ರಮಣಕ್ಕೆ ಮುಂದಾಗಿರುವ ರಷ್ಯಾಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡುವುದಕ್ಕಾಗಿ ಮತ್ತಷ್ಟುದೇಶಗಳು ರಷ್ಯಾದ ಮೇಲೆ ನಿರ್ಬಂಧ ವಿಧಿಸಿವೆ. ರಷ್ಯಾದೊಂದಿಗಿನ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಿದ್ದ ಅಮೆರಿಕಾ ಆರ್ಥಿಕವಾಗಿ ಬುಧವಾರ ಮತ್ತಷ್ಟುನಿರ್ಬಂಧ ವಿಧಿಸಿದೆ. ಇದರೊಂದಿಗೆ ಜರ್ಮನಿ, ಜಪಾನ್, ಕೆನಡಾಗಳು ಸಹ ನಿರ್ಬಂಧ ಘೋಷಿಸಿವೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿದೆ ಎಂದು ಆರೋಪಿಸಿರುವ ಅಮೆರಿಕದ ವಿದೇಶಾಂಗ ಸಚಿವ ಟೋನಿ ಬ್ಲಿಂಕನ್, ರಷ್ಯಾದ ವಿದೇಶಾಂಗ ಸಚಿವ ಸೆರ್ಗೇಯ್ ಲ್ಯಾವ್ರೋವ್ ಅವರೊಂದಿಗೆ ಬುಧವಾರ ನಿಗದಿಯಾಗಿದ್ದ ಸಭೆಯಲ್ಲಿ ರದ್ದು ಮಾಡಿದ್ದಾರೆ.
ಉಕ್ರೇನ್ ಮೇಲೆ ಆಕ್ರಮಣ ಮಾಡಲು ಚೀನಾ ತನ್ನ ಸೇನೆಯನ್ನು ಜಮಾವಣೆ ಮಾಡುತ್ತಿರುವ ಬೆನ್ನಲ್ಲೇ ಸಭೆ ನಡೆಸಿರುವ ಉಕ್ರೇನ್ ದೇಶದಲ್ಲಿ 30 ದಿನಗಳ ಕಾಲ ತುರ್ತು ಪರಿಸ್ಥಿತಿ ವಿಧಿಸಲು ನಿರ್ಧರಿಸಿದೆ. ಈ ತುರ್ತು ಪರಿಸ್ಥಿತಿ ಡೊನೆಟಸ್ಕ್ ಮತ್ತು ಲುಹಾನ್ಸ್ ಪ್ರದೇಶಗಳನ್ನು ಹೊರತು ಪಡಿಸಿ ದೇಶಾದ್ಯಂತ ಅನ್ವಯವಾಗಲಿದೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿರುತ್ತದೆ.