ಚಳ್ಳಕೆರೆ,ಮಾ,10: ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೋತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ .ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ ರೈತರ ಮನೆ ಬಾಗಿಲಿಗೆ ಎನ್ನುವ ಕಾರ್ಯಕ್ರಮದಲ್ಲಿ ಹಲವು ಸೌಲಭ್ಯಗಳನ್ನು ರೈತರಿಗೆ ನೀಡಲು ಮುಂದಾಗಿರುವುದಾಗಿ ತಹಶೀಲ್ದಾರ್ ಎನ್.ರಘುಮೂರ್ತಿ ಅವರು ಹೇಳಿದರು .
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಇರುವ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಭಾಗಿಯಾಗಿ ಸಂಬಂಧಿಸಿದ ಎಲ್ಲ ರೈತರಿಗೂ ಈ ಸೌಲಭ್ಯವನ್ನು ಒದಗಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸರ್ಕಾರಿ ವ್ಯವಸ್ಥೆ ಮತ್ತು ಚುನಾಯಿತ ಪ್ರತಿನಿಧಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಮತ್ತು ನಂಬಿಕೆ ಮೂಡುವ ನಿಟ್ಟಿನಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪ್ರತಿಯೊಬ್ಬರಿಗೂ ಒದಗಿಸಲು ಪಣ ತೊಡಬೇಕೆಂದು ಹೇಳಿದರು.
ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎನ್ನುವ ನೂತನ ಕಾರ್ಯಕ್ರಮವು ಚಳ್ಳಕೆರೆ ತಾಲೂಕಿನ ಗೊರ್ಲಕಟೆ ಗ್ರಾಮದಲ್ಲಿ 12 ನೇತಾರೀಖು ನಂದು ಪ್ರಾರಂಭವಾಗಲಿದ್ದು ಶಾಸಕರಾದ ಟಿ.ರಘುಮೂರ್ತಿ ಯವರ ಅಧ್ಯಕ್ಷತೆ ಯಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಹಾಗೆಯೇ ಇದೇ ದಿನದೊಂದು ತಾಲೂಕಿನ ಉಳಿದಂತೆ ಎಲ್ಲಾ ಗ್ರಾಮಗಳಲ್ಲಿ ಏಕಕಾಲದಲ್ಲಿ ರೈತರುಗಳಿಗೆ ಕಂದಾಯ ದಾಖಲೆಗಳನ್ನು ವಿತರಣೆ ಮಾಡುವ ಕಾರ್ಯಕ್ರಮವು ಪ್ರಾರಂಭವಾಗುತ್ತದೆ ಎಂದು ವಿವರಿಸಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಂಟಿ ಕೋಡಿ ಕೋಡಿ ಭೀಮರಾಯ ರಾಜಸ್ವನಿರೀಕ್ಷಕ ಚೇತನ್ ಕುಮಾರ್ ಪಟ್ಟಣ ಪಂಚಾಯತಿ ಸದಸ್ಯರಾದ ಕೆಪಿ ತಿಪ್ಪೇಸ್ವಾಮಿ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಟಿ ಬಸಣ್ಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಇದ್ದರು.