ಬೀದರ್ ದರೋಡೆ – ಗನ್ ಮ್ಯಾನ್ ಸುತ್ತಾ ಪೊಲೀಸರ ಅನುಮಾನ
ಬೀದರ್,ಜ,16-ಗನ್ ಮ್ಯಾನ್ ಇಲ್ಲದೆ ಎಟಿಎಂ ಗೆ ಹಣ ತುಂಬಲು ಬಂದಿದ್ದ ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಯ ಚಲನವಲನಗಳೆ ಅನುಮಾನಕ್ಕೆ ಕಾರಣವಾಗಿದೆ.
ಯಾವುದೇ ಎಟಿಎಂ ಗೆ ಹಣ ತುಂಬುವಾಗ ಗನ್ ಮ್ಯಾನ್ ಇಲ್ಲದೆ ಹೇಗೆ ಬಂದರು ಎನ್ನುವುದೆ ಪ್ರಶ್ನೆಯಾಗಿದ್ದು ,ಇದೇ ಅನುಮಾನದ ಮೇಲೆ ಪೊಲೀಸರು ತನಿಖೆ ನಡಿಸುತ್ತಿದ್ದಾರೆ.
ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ಬೆಳಿಗ್ಗೆ ನಡೆದ ಈ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ
ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ಸಿಬ್ಬಂದಿಗಳ ಮೇಲೆ ೮ ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದು, ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗಿರಿ ವೆಂಕಟೇಶ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು, ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ (೨೬) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಟಿಎಂಗೆ ಹಣ ಹಾಕಲು ಸಿಬ್ಬಂದಿಗಳು ವಾಹನದಿಂದ ಹಣದ ಪೆಟ್ಟಿಗೆ ಹೊರ ತೆಗೆಯುತ್ತಿದ್ದಂತೆಯೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ೯೩ ಲಕ್ಷ ರೂಪಾಯಿಗಳಿದ್ದ ಹಣದ ಪೆಟ್ಟೆಗೆಯನ್ನು ಬೈಕ್‌ನಲ್ಲಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿದ್ದು, ಈ ಕೃತ್ಯದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಎಸ್‌ಪಿ ಪ್ರದೀಪ್ ಗುಮಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆಗೆ ಮೂರು ವಿಶೇಷ ತಂಡ ರಚಿಸಲಾಗಿದ್ದು, ೨೪ ಗಂಟೆಯೊಳಗೆ ದುಷ್ಕರ್ಮಿಗಳನ್ನು ಬಂಧಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.
ಬ್ಯಾಂಕ ಸಿಬ್ಬಂದಿಯ ಮಾಹಿತಿ ಪ್ರಕಾರ ಒಟ್ಟು ೯೩ ಲಕ್ಷ ರೂಪಾಯಿ ಆ ಪೆಟ್ಟಿಗೆಯಲ್ಲಿ ಇರುವುದ್ದಾಗಿ ಮಾಹಿತಿ ನೀಡಿದ್ದಾರೆ. ದರೋಡೆಕೊರರು ದ್ವೀಚಕ್ರ ವಾಹನದ ಮೇಲೆ ಇಟ್ಟುಕೊಂಡು ಹೋಗಿದ್ದಾಗಿ ಸಿಸಿ ಟಿವಿ ದೃಶ್ಯ ಮಾಹಿತಿ ನೀಡುತ್ತಿವೆ. ಈ ಘಟನೆಯನ್ನು ಬೀದರ ಜಿಲ್ಲೆಯ ಪೊಲೀಸರಿಗೆ ಸವಾಲಿನಂತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಪ್ರದೀಪ ಯಾವ ರೀತಿ ಈ ಪ್ರಕರಣ ಭೇದಿಸುತ್ತಾರೆ ಎಂಬುದು ಜಿಲ್ಲೆಯ ಜನರು ನಿರೀಕ್ಷಿಸುತ್ತಿದ್ದಾರೆ.
ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಜಿಎಸ್’ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು, ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಖದೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್‌ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ