ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ
ನವದೆಹಲಿ, ಜ,17:ಎಎಪಿ ಯ ಪ್ರಣಾಳಿಕೆಗಳನ್ನು ಬಿಜೆಪಿ ನಕಲು ಮಾಡಿದ್ದು,ಯಾವುದೇ ಕಾರಣಕ್ಕೂ ಅವುಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವುದಿಲ್ಲ ಎಂದು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯಮಾಡಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ ಅವರ ನಡೆಯನ್ನು “ತಪ್ಪು” ಎಂದು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
“ಕೇಜ್ರಿವಾಲ್ ಉಚಿತ ಕೊಡುಗೆಗಳನ್ನು ನೀಡುತ್ತಾರೆ ಎಂದು ಬಿಜೆಪಿ ಪದೇ ಪದೇ ಹೇಳುತ್ತಿದೆ. ಆದರೆ ಇಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ದೆಹಲಿಯ ಜನರಿಗೆ ಉಚಿತ ಕೊಡುಗೆಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ನಮ್ಮ ಬಗ್ಗೆ ಮಾಡಿದ ಟೀಕೆಗಳು ತಪ್ಪು ಎಂದು ಅವರು ಒಪ್ಪಿಕೊಳ್ಳಬೇಕು ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.” ಎಂದು ಕೇಜ್ರಿವಾಲ್ ಹೇಳಿದ್ದಾರೆ.
“ಮೋದಿ ಅವರು ಮುಂದೆ ಬಂದು ಬಿಜೆಪಿಯ ಈ ಭರವಸೆಗಳಿಗೆ ಸಮ್ಮತಿಸುವುದಾಗಿ ಹೇಳಿಕೆ ನೀಡಬೇಕು. ಉಚಿತ ಯೋಜನೆಗಳನ್ನು ನೀಡುತ್ತಿರುವ ನಮ್ಮ ನಡೆಯು ಸರಿಯಾಗಿದೆ ಎಂದು ಅವರು ಹೇಳಬೇಕು” ಎಂದು ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಎಎಪಿ ಈಗಾಗಲೇ ನೀಡುತ್ತಿರುವುದೆ ಆಗಿದೆ ಎಂದು ಅವರು ಹೇಳಿದ್ದಾರೆ.
“ನಾವು ನೀಡುತ್ತಿರುವ ಯೋಜನೆಗಳನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಹಾಗಾದರೆ ಜನರು ಅವರಿಗೆ ಏಕೆ ಮತ ಹಾಕಬೇಕು? ಕಾನೂನು ಮತ್ತು ಸುವ್ಯವಸ್ಥೆಯ ಸುಧಾರಣೆಗಳ ಕುರಿತು ಅವರು ಪ್ರಣಾಳಿಕೆಯಲ್ಲಿ ಯಾವುದೇ ಭರವಸೆಯನ್ನು ನೀಡಿಲ್ಲ. ಅವರ ಚುನಾವಣಾ ಪ್ರಣಾಳಿಕೆ ಸುಳ್ಳುಗಳ ಕಂತೆ” ಎಂದು ಬಣ್ಣಿಸಿದ್ದಾರೆ. ದೆಹಲಿ ಚುನಾವಣೆಗೆ ಬಿಜೆಪಿ
ಬಿಜೆಪಿ ಹಳೆಯ ಯೋಜನೆಗಳ ಭರವಸೆ ಮಾತ್ರ ನೀಡಿದೆ. ಆದರೆ ಅವುಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಮೊಹಲ್ಲಾ ಚಿಕಿತ್ಸಾಲಯಗಳನ್ನು ಮುಚ್ಚಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಜನರಿಗೆ ಈ ಚಿಕಿತ್ಸಾಲಯಗಳು ಬೇಕಾ ಅಥವಾ ಬೇಡವೇ ಎಂದು ಕೇಳಲು ಎಎಪಿ ದೆಹಲಿಯಾದ್ಯಂತ ಸಂಚರಿಸಲಿದೆ ಎಂದು ಮಾಜಿ ಕೇಜ್ರಿವಾಲ್ ಹೇಳಿದ್ದಾರೆ.