ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ
ನವದೆಹಲಿ, ಜ,18-ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸೊಎಂ ಖುರ್ಚಿಗಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿರುವ ಅವರು ಯಾರು ಯಾವುದೇ ಹೇಳಿಕೆ ನೀಡಬಾರದು,ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಯಾವಾಗ ಏನು ಮಾಡಬೇಕೋ ಅದನ್ನು ಮಾಡಲಾಗುತ್ತದೆ ನಾಯಕರೆಲ್ಲರೂ ಬಾಯಿ ಮುಚ್ಚಿಕೊಂಡಿರಬೇಕೆ ಎಂದು ವಾರ್ನಿಂಗ್ ನೀಡಿದ್ದಾರೆ.
ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸವನ್ನು ಮೊದಲು ಮಾಡಿ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಿರಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.
ಯಾವುದೇ ವಿಷಯಗಳ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾವೆಲ್ಲರೂ ಇದ್ದೇವೆ. ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರು ಇದ್ದೇವೆ. ಯಾವಾಗ ಏನು ಮಾಡಬೇಕು ಎಂಬುದನ್ನು ನಾವು ತೀರ್ಮಾನಿಸುತ್ತೇವೆ. ಹೈಕಂಡ್ ಗೆ ಒಂದು ಗುರಿ ಇರುತ್ತದೆ. ಹೈಕಾಂಡ್ ತೀರ್ಮಾನವೇ ಅಂತಿಮ. ಇಲ್ಲಿ ನೂರು ಜನ ನೂರು ಮತನಾಡಿದ ಮಾತ್ರಕ್ಕೆ ಅದಕ್ಕೆಲ್ಲ ಉತ್ತರಿಸಲು ಆಗಲ್ಲ ಎಂದು ಹೇಳಿದರು.
ಇದರಿಂದ ಈ ಹೇಳಿಕೆಗಳಿಗೆ ಕಡಿವಾಣ ಹಾಕಿದಂತಾಗಿದೆ.