ಮುಡಾ ಹಗರಣ- ಸಿದ್ದು ರಾಜೀನಾಮೆಗೆ ಹೆಚ್ಚಿದ ಒತ್ತಡ
ಬೆಂಗಳೂರು, ಜ,18-ಮುಡಾ ಪ್ರಕರಣ ಕುರಿತ ಜಾರಿ ಮತ್ತು ನಿರ್ದೇಶನಾಲಯ ( ಇಡಿ) ಹಗರಣ ನಡೆದಿರುವುದು ನಿಜ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಬೆನ್ನಲ್ಲೇ ಪ್ರತಿಪಕ್ಷದವನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆವೊತ್ತಾಯಿಸಿದ್ದಾರೆ.
ಮುಡಾ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಇಡಿ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಬಹುಶಃ ಇದು ಸಿದ್ದರಾಮಯ್ಯ ಅವರಿಗೆ ಹುರುಳಾಗುವ ಸಾಧ್ಯತೆಗಳಿವೆ.
ಇಡಿ ಈ ಹಗರಣ ನಿಜ ಎನ್ನುವ ಒ್ರಕಟಣೆ ಹೊರಡಿಸಿದ ಬೆನ್ನಲ್ಲೇ ಪ್ರತಿ ಪಕ್ಷದ ನಾಯಕ ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,ಸಂಸದ ಯದವೀರ್ ಸೇರಿದಂತೆ ಪ್ರತಿಪಕ್ಷಗಳು ಸಿಎಂ ರಾಜೀನಾಮೆ ಗೆ ಆಗ್ರಹಿಸಿವೆ.
ಇದು ಸಹಜವಾಗಿಯೇ ಸಿಎಂಗೆ ಹುರುಳಾಗುವ ಸಾಧ್ಯತೆ ಇದೆ ,ಅಲ್ಲದೆ ಕಾಂಗ್ರೆಸ್ ಹೈಕಮಾಂಡ್ ಕೂಡ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ ಎಂದು ನಾಟಕವಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖವಾಡ ನಿನ್ನೆ ಇಡಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಿಂದ ಸಂಪೂರ್ಣವಾಗಿ ಕಳಚಿ ಬಿದ್ದಿದೆ. ಮುಖ್ಯಮಂತ್ರಿಗಳ ಧರ್ಮಪತ್ನಿ ಅವರಿಗೆ ಅಕ್ರಮವಾಗಿ ಹಂಚಿಯಾಗಿರುವ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳಲ್ಲಿ ಸಿದ್ದರಾಮಯ್ಯನವರ ರಾಜಕೀಯ ಪ್ರಭಾವ ಬಳಕೆಯಾಗಿರುವುದು ಇಡಿ ಹೇಳಿಕೆಯಲ್ಲಿ ಸುಸ್ಪಷ್ಟವಾಗಿದೆ ಎಂದು ಅಶೋಕ್ ಹೇಳಿದ್ದಾರೆ.
ಸಿದ್ದರಾಮಯ್ಯನವರ ಧರ್ಮಪತ್ನಿ ಅವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆಯಾದ ಸಂದರ್ಭದಲ್ಲಿ ಮುಡಾ ಆಯುಕ್ತರಾಗಿದ್ದ ನಟೇಶ್ ಮತ್ತಿತರ ಅಧಿಕಾರಿಗಳು ಇನ್ನೂ ಅನೇಕ ಅಕ್ರಮಗಳನ್ನು ಎಸಗಿರುವುದು ಕೂಡ ಬೆಳಕಿಗೆ ಬಂದಿದ್ದು, ಸುಮಾರು 300 ಕೋಟಿ ರೂಪಾಯಿ ಬೆಲೆಬಾಳುವ 142 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮೂಡಾ ಹಗರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜಾರಿ ನಿರ್ದೇಶನಾಲಯವು (ಇಡಿ) ಮುಡಾದಲ್ಲಿ ನಡೆದಿರುವ ನಿವೇಶನಗಳ ಲೂಟಿ, ಸಾವಿರಾರು ಕೋಟಿ ರೂಪಾಯಿಗಳ ನಷ್ಟ, ಹಾಗೂ ಅಕ್ರಮ ಹಣ ವರ್ಗಾವಣೆ ಹಗರಣದ ಕುರಿತ ತನಿಖೆಯಲ್ಲಿ ಮುಖ್ಯಮಂತ್ರಿಗಳ ಹಸ್ತಕ್ಷೇಪವಿರುವ ಆರೋಪದಲ್ಲಿಯೂ ಸತ್ಯಾಂಶವಿದೆಯೆಂಬ ಅಂಶಗಳನ್ನು ವಿವರಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದ್ದಾರೆ.
ಲೋಕಾಯುಕ್ತದದಲ್ಲಿ ತಾವೇ ನಿಯುಕ್ತಿಗೊಳಿಸಿಕೊಂಡ ತಮ್ಮ ಅಧಿಕಾರಿಗಳ ಮೂಲಕ ತನಿಖೆ ನಡೆಸಿ, ಕ್ಲೀನ್‌ಚಿಟ್ ಪಡೆಯುವ ತಯಾರಿಯಲ್ಲಿದ್ದ ಸಿದ್ದರಾಮಯ್ಯನವರಿಗೆ ಇಡಿ ಬಿಡುಗಡೆ ಮಾಡಿರುವ ತನಿಖಾ ವರದಿಯ ಪ್ರಕಟಣೆ ಅವರ ಕಳಂಕಿತ ವ್ಯಕ್ತಿತ್ವವನ್ನು ಮತ್ತೊಮ್ಮೆ ಅನಾವರಣಗೊಳಿಸಿದೆ. ಇಡಿ ಮುಡಾ ನಿವೇಶನಗಳ ಲೂಟಿಕೋರತನದ ಭ್ರಷ್ಟತೆಯ ಕರ್ಮಕಾಂಡವನ್ನು ಇದೀಗ ಜನತೆಯ ಮುಂದಿಟ್ಟಿದೆ ಎಂದಿದ್ದಾರೆ.