ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

Share

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

ತುಮಕೂರು, ಜ,18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದರು. ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

Girl in a jacket
error: Content is protected !!