ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್
by ಕೆಂಧೂಳಿ
ನವದೆಹಲಿ, ಜ,24- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದೊಗೂ ಸುಪ್ರೀಂಕೋರ್ಟ್ ನೋಟೀಸ್ ಜಾರಿಮಾಡಿದೆ.
ಈ ಮೂಲಕ ಬೇಲಿನಿಂದ ಹೊರಗಿರುವ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಆರೋಪಿಗಳಾದ ದರ್ಶನ್ ತೂಗುದೀಪ, ಪವಿತ್ರಾ ಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು ಈಗ ಮತ್ತೆ ಆತಂಕ ಎದುರಾಗಿದೆ.
ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿ ತಿಂಗಳಾಗುತ್ತಾ ಬಂದಿದೆ. ಪ್ರಸ್ತುತ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ.
ಆದರೆ ಪ್ರಕರಣದ ಸಂಪೂರ್ಣ ಸಾಕ್ಷ್ಯಗಳನ್ನು ಕಲೆ ಹಾಕಿದ ಪೊಲೀಸರ ತಂಡ ದರ್ಶನ್ ಹಾಗೂ ಗ್ಯಾಂಗ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಳು ಜನರಿಗೆ ನೋಟೀಸ್ ನೀಡಿದೆ. ಆರೋಪಿಗಳು ನೋಟೀಸ್‌ಗೆ ಉತ್ತರ ನೀಡಬೇಕಾಗುತ್ತದೆ. ಇದಕ್ಕಾಗಿ ಆರೋಪಿಗಳ ಪರ ವಕೀಲರು ಮುಂದಿನ ಇಯರಿಂಗ್‌ನಲ್ಲಿ ಹಾಜರಾಗಲಿದ್ದಾರೆ. ಹೈಕೋರ್ಟ್‌ನಲ್ಲಿ ಆದಂತೆ ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1,492 ಪುಟಗಳ ದಾಖಲೆಯನ್ನು ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಸ್ಟೇಷನ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ, ಆರೋಪಿಗಳ ಹಿನ್ನೆಲೆ ಮಾಹಿತಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ, ಜಾಮೀನು ಅರ್ಜಿ ಈ ಹಿಂದೆ ವಜಾಗೊಂಡಿದ್ದ ದಾಖಲೆ, ದರ್ಶನ್ ಅವರ ಅನಾರೋಗ್ಯ ಸಂಬಂಧಿಸಿದಂತೆ ವೈದ್ಯರ ವರದಿ ಎಲ್ಲವೂ ಇದರಲ್ಲಿದೆ.