870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ
ಕೂಡ್ಲಿಗಿ ನ9-1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು.…




















