Girl in a jacket

Author Manjunath

ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತಾಡಿದರೆ, ಏಕವಚನದಲ್ಲಿ ಮಾತಾಡಿದರೆ ಕ್ರಮವಿಲ್ಲ: ಆರ್‌.ಅಶೋಕ

ಬೆಂಗಳೂರು, ಜು,5-ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಐಎಎಸ್‌ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ…

ಹುಚ್ಚುತನದ ಹೇಳಿಕೆಗೆ ಜನರ ಕ್ಷಮೆ ಕೇಳಿ: ಯಡಿಯೂರಪ್ಪ ಆಗ್ರಹ

ಬೆಂಗಳೂರುಜು,05- ಆರೆಸ್ಸೆಸ್ ನಿಷೇಧ ಕುರಿತ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದು, ಅವರು ತಮ್ಮ ಹೇಳಿಕೆ ಸಂಬಂಧ ದೇಶದ ಜನರ ಕ್ಷಮಾಪಣೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ ಎಂದರಲ್ಲದೆ, ಇಡೀ ದೇಶದ…

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ: ಲಕ್ಷ್ಮೀ ಹೆಬ್ಬಾಳಕರ್

ಬೀದರ್,ಜು,05- ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ‌ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು,…

ಕುವೆಂಪು ಅವರ  ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಜು 5-ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಾಗುತ್ತಿದೆ…

ತೆರಿಗೆ ಮತ್ತು ಖರ್ಚು ಕಡಿತಗಳ ಹೊಸ ಕಾನೂನಿಗೆ ಟ್ರಂಪ್ ಸಹಿ

ವಾಷಿಂಗ್ಟನ್,ಜು,೦೫-ತೆರಿಗೆ ಮತ್ತು ಖರ್ಚು ಕಡಿತಗಳ ಬೃಹತ್ ಪ್ಯಾಕೇಜ್‌ನ ಹೊಸ ಕಾನೂನಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಶ್ವೇತಭವನದಲ್ಲಿ ಸಹಿಹಾಕಿದರು. ಟ್ರಂಪ್ ಅವರ ವಲಸೆ ನಿಗ್ರಹ ಕ್ರಮಕ್ಕೆ ಹಣಕಾಸು ಒದಗಿಸುವ, ೨೦೧೭ ರ ತೆರಿಗೆ ಕಡಿತಗಳನ್ನು ಶಾಶ್ವತಗೊಳಿಸುವ ಮತ್ತು ಲಕ್ಷಾಂತರ ಅಮೆರಿಕನ್ನರನ್ನು ಆರೋಗ್ಯ ವಿಮೆಯಿಂದ ವಂಚಿತಗೊಳಿಸುವ ನಿರೀಕ್ಷೆಯಿರುವ ಈ ಮಸೂದೆಯನ್ನು ಸದನದಲ್ಲಿ ಭಾವನಾತ್ಮಕ ಚರ್ಚೆಯ ನಂತರ ೨೧೮-೨೧೪ ಮತಗಳಿಂದ ಅಂಗೀಕರಿಸಲಾಯಿತು. “ನಮ್ಮ ದೇಶದಲ್ಲಿ ಜನರು ಇಷ್ಟೊಂದು ಸಂತೋಷವಾಗಿರುವುದನ್ನು ನಾನು ಎಂದಿಗೂ ನೋಡಿಲ್ಲ, ಏಕೆಂದರೆ ಹಲವಾರು ವಿಭಿನ್ನ ಗುಂಪುಗಳ…

ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 4- ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ…

ಸಿಎಂ ಸಿದ್ದರಾಮಯ್ಯ ಬೇಟಿಯಾದ ಒಲಂಪಿಕ್ ಪದಕ ವಿಜೇತ ನೀರಜ್ ಚೋಪ್ರ

ಬೆಂಗಳೂರು, ಜು,03-ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು,ಜು,03- ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು…

ಮಾವು ಖರೀದಿ :ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

ಬೆಂಗಳೂರು, ಜು 3-ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಕಾಳಜಿ, ನಿರಂತರ ಪ್ರಯತ್ನ , ಮೇಲ್ವಿಚಾರಣೆಯಿಂದಾಗಿ ತಕ್ಣಣವೇ ಹಣ ಬಿಡುಗಡೆಗೆ ಸರ್ಕಾರಿ ‌ಅದೇಶ ಹೊರ ಬಿದ್ದಿದೆ. ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆಮಾಡುವಂತೆ ರಾಜ್ಯ…

“ಕೊರಗಜ್ಜ” ಚಿತ್ರ ತಂಡದಿಂದ ಜುಲೈ 6 ಎಂ.ಎಸ್.ಸತ್ಯು ಅವರ 96 ವರ್ಷದ ಸಂಭ್ರಮಾಚರಣೆ

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು “ಕೊರಗಜ್ಜ” ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತು ಚಿತ್ರ ತಂಡ ಹೆಚ್ಚು ಸಂಭ್ರಮಿಸುತ್ತಿದೆ. ಇದಕ್ಕೆ ಕಾರಣ ಈ ಚಿತ್ರದಲ್ಲಿ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಸತ್ಯುರವರು ನೀಡಿರುವ ಕೊಡುಗೆ. ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಮ್ಸ್ ಬ್ಯಾನರ್ ಅಡಿಯ ಬಹು ನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಇನ್ನೇನು ಬಿಡುಗಡೆಗೆ ಸಿದ್ಧವಾಗುತ್ತಿದೆ. ದೇಶದ ಬಲು…

ಕ್ಯಾಪಿಟಲ್ ಸಿಟಿ” ನಾಳೆ ಬಿಡುಗಡೆ

“ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ಜಿಂದಗಿ” ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಚಿತ್ರ ಜನರ ಮನಸ್ಸಿಗೆ ಹತ್ತಿರವಾಗಿದೆ. ಪ್ರೇರಣ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟರಾದ ಸುಮನ್,…

ಆಗಸ್ಟ್ 22 ಕ್ಕೆ  “S\O ಮುತ್ತಣ್ಣ” ಚಿತ್ರ ತೆರೆಗೆ

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂಬ ಕಾತುರ ಅಭಿಮಾನಿಗಳಲ್ಲಿತ್ತು. ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ. “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ರಂದು…

ಬಾಬಾನಗರದ ಬಳಿ ಹೊಸ ಕೆರೆ ನಿರ್ಮಾಣದ ಉದ್ದೇಶ: 550 ಕೋಟಿ ರೂ. ಅನುದಾನಕ್ಕೆ ಮನವಿ

ಬೆಂಗಳೂರು,ಜು,03- ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿಯಲ್ಲಿ ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಜಲಸಂಪನ್ಮೂಲ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳನ್ನು ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಗುರುವಾರ…

ರಾಜ್ಯಾದ್ಯಂತ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಚಾಲನೆ

ಬೆಂಗಳೂರು, ಜು,03-ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ…

ಉಡುಪಿ ಮೂಲಕ ವಿವಿಧ ದೇಶಗಳಿಗೆ ಡ್ರಗ್ಸ್ ಮಾರುತ್ತಿದ್ದ ಜಾಲ ಪತ್ತೆ,10 ಮಂದಿ ಬಂಧನ

ನವದೆಹಲಿ, ಜು,03-ಕರ್ನಾಟಕದ ಉಡುಪಿ ಮೂಲಕ ಹತ್ತಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ದೆಹಲಿ ಪೊಲೀಸರು ಬೇದಿಸಿದ್ದು ಈ ಸಂಬಂಧ 10 ಮಂದಿಯನ್ನು ಬಂದಿಸಿದ್ದಾರೆ. ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್…

ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು,ಜು,02- ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ.…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನೂ ಉತ್ತರ ಜಿಲ್ಲೆ;ಸಚಿವಸಂಪುಟದ ನಿರ್ಣಯ

ಬೆಂಗಳೂರು, ಜು,02-ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲು ಇಂದು ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಈ ಕುರಿತು ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರ ನೀಡಿದರು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ…

ಕರ್ನಾಟಕದಾದ್ಯಂತ ಡಿಜಿಟಲ್ ಬೆಳವಣಿಗೆಯನ್ನು ವಿಕೇಂದ್ರೀಕರಿಸುವ ಹೊಣೆ ಹೊತ್ತ ಎಫ್. ಕೆ. ಸಿ. ಸಿ. ಐ: ಎಂ ಜಿ ಬಾಲಕೃಷ್ಣ,

ಬೆಂಗಳೂರು, ಜು,02- ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಯ ನಿಟ್ಟಿನಲ್ಲಿ, ಕರ್ನಾಟಕ ವಾಣಿಜ್ಯ ಕೈಗಾರಿಕಾ ಮಹಾ ಸಂಸ್ಥೆ ಬೆಂಗಳೂರಿನ ಕ್ಯಾಬಿನೆಟ್ ಹಾಲ್ನಲ್ಲಿ “ಬೆಂಗಳೂರಿನ ಹೊರಗೆ -ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳ ಡಿಜಿಟಲ್ ಸಾಮರ್ಥ್ಯವನ್ನು ಅನ್ಲಾಕ್ ಮಾಡುವುದು” ಎಂಬ ಶೀರ್ಷಿಕೆಯ ಪವರ್-ಪ್ಯಾಕ್ಡ್ ಅಧಿವೇಶನವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಕರ್ನಾಟಕದ ಡಿಜಿಟಲ್ ಆರ್ಥಿಕತೆಯನ್ನು ರಾಜಧಾನಿಯನ್ನು ಮೀರಿ ವಿಸ್ತರಿಸುವ ಮತ್ತು ಉದಯೋನ್ಮುಖ ನಗರಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ತುರ್ತು ಅಗತ್ಯವನ್ನು ಎತ್ತಿ ತೋರಿಸಿತು. ಮುಖ್ಯ ಭಾಷಣ ಮಾಡಿದ ಎಫ್. ಕೆ. ಸಿ. ಸಿ.…

ರವಿಚಂದ್ರನ್ ಬಹುನಿರೀಕ್ಷಿತ “ತಪಸ್ವಿ” ನಾಳೆ ತೆರೆಮೇಲೆ

ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ತಪಸ್ಸಿ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ತಪಸ್ಸಿ” ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ. ಭಾಸ್ಕರ್, ಅನುಶಾ ಕಿಣಿ, ರಥರ್ವ, ಸಚ್ಚಿನ್, ಗುಬ್ಬಿ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರೆ ಛಾಯಾಗ್ರಹಣ ಹಾಗೂ ಕಲಾ ನಿರ್ದೇಶನವನ್ನೂ ಮಾಡಿರುವ ಬಹು ನಿರೀಕ್ಷಿತ…

ನೈಜ ಘಟನೆ ಮತ್ತು ವ್ಯಕ್ತಿತ್ವಗಳ ಕಾಲ್ಪನಿಕ ಗುಚ್ಛ; “ಜಂಗಲ್‌ ಮಂಗಲ್‌

ಸ್ಯಾಂಡಲ್‌ವುಡ್‌ನಲ್ಲಿ ಭಿನ್ನ ವಿಭಿನ್ನ ಕಂಟೆಂಟಿಗೆ ಬೆಂಬಲ ಸಿಕ್ಕೇ ಸಿಗುತ್ತೆ. ಹಾಗೆ ಖ್ಯಾತನಾಮ ನಿರ್ದೇಶಕರಿಂದ ಮೆಚ್ಚುಗೆ ಪಡೆದ ಚಿತ್ರವೇ “ಜಂಗಲ್‌ ಮಂಗಲ್‌”. ಇನ್ನೇನು ಇದೇ ಜುಲೈ 4ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಗೆ ಬರಲಿದೆ. ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಶೈಲಿಯಲ್ಲಿ ಈ “ಜಂಗಲ್‌ ಮಂಗಲ್‌” ಸಿನಿಮಾವನ್ನು ನಿರ್ದೇಶಕ ರಕ್ಷಿತ್‌ ಕುಮಾರ್‌ ಕಟ್ಟಿಕೊಟ್ಟಿದ್ದಾರೆ. ಕಳೆದ ಎಂಟತ್ತು ವರ್ಷಗಳಿಂದ ಸಿನಿಮಾ, ಸೀರಿಯಲ್‌ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿ ಇದೀಗ ಸ್ವತಂತ್ರ ನಿರ್ದೇಶಕರಾಗಿ ಆಗಮಿಸುತ್ತಿದ್ದಾರೆ. ಹಾಗಾದರೆ ಏನಿದು ʻಜಂಗಲ್‌ ಮಂಗಲ್‌ʼ? ಯುವ ಜೋಡಿಯ…

1 2 3 118
Girl in a jacket