Girl in a jacket

Author Manjunath

ಪಂಜಾಬ್ ತಂಡವನ್ನು ಬಗ್ಗು ಬಡೆದ ರಾಯಲ್ ಚಾಲೆಂಜರ್ಸ್ ತಂಡ

ಮುಲ್ಲಾನ್‌ಪುರ,ಏ,೨೦- ತವರಿನ ಅಂಗಳ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಪಂಜಾಪ್ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಐದನೇ ಗೆಲುವು ಪಡೆದಿದ್ದಾರೆ. ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಬೆಂಗಳೂರು ಬಾಯ್ಸ್, ಪಂಜಾಬ್‌ಗೆ ನುಗ್ಗಿ ಅಯ್ಯರ್ ಪಡೆಯನ್ನು ಬಗ್ಗುಬಡಿದಿದೆ. ಈ ಮೂಲಕ ಸೋಲಿನ ಲೆಕ್ಕಾಚಾರ ಚುಕ್ತ ಮಾಡುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಶಸ್ವಿಯಾಗಿದೆ. ೧೫೮ ರನ್‌ಗಳ ಗುರಿಯನ್ನು ೭ ವಿಕೆಟ್ ಅಂತರದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ…

ಕರ್ನಾಟಕ ನಿವೃತ್ತ ಡಿಜಿಪಿ ಓಂ  ಪ್ರಕಾಶ್ ಹತ್ಯೆ

ಬೆಂಗಳೂರು,ಏ.೨೦-ಆಸ್ತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಚ್ ಎಸ್ ಆರ್ ಲೇಔಟ್‌ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಕೇಡರ್ ೧೯೮೧ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು ೨೦೧೫ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು…

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ

ಬೆಳಗಾವಿ ಏ 20- ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ…

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ಏ 20-ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150…

ಜಾತಿವಾರು ಜನಗಣತಿ ದತ್ತಾಂಶ ನೀಡಲು ಸನ್ನಧರಾಗಿ – ಇಮ್ಮಡಿ ಶ್ರೀ

ಚಿತ್ರದುರ್ಗ, ಏ,20-ಸುಪ್ರೀಂ ಕೋರ್ಟ್ ಆಗಸ್ಟ್-೦೫, ೨೦೨೪ ರಂದು ಆದೇಶವೊಂದನ್ನು ನೀಡಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೆ ನಿಖರ ದತ್ತಾಂಶ ಆಧಾರದ ಮೇಲೆ ಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂಬ ಆದೇಶವೊಂದನ್ನು ನೀಡಿತ್ತು.  ಅದರನ್ವಯ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ತರುವಂತಹ ಪ್ರಯತ್ನಗಳು ನಡೆಯುತ್ತಲೇ ಇದೆ.  ಈ ಮಧ್ಯೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರವರ ನೇತೃತ್ವದಲ್ಲಿ ಆಯೋಗವೊಂದನ್ನು ರಚನೆ ಮಾಡಿರುವ ರಾಜ್ಯ ಸರ್ಕಾರ ಜಾತಿವಾರು ಅಂಕಿ-ಅಂಶಗಳನ್ನು ಸಂಗ್ರಹಿಸಿ (ದತ್ತಾಂಶ) ಒಳ ಮೀಸಲಾತಿಗೆ ಶಿಫಾರಸ್ಸು ಮಾಡಿದ ಆಧಾರದ…

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ

ಬೀದರ್, ಏ.20-ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ…

ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ:ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು

ಬೆಳಗಾವಿ, ಏ, 22-:ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು…

ಕಾಲು, ಬಾಯಿ ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಮಧು ಬಂಗಾರಪ್ಪ ಚಾಲನೆ

ಕುಬಟೂರು,ಏ,20- ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಮತ್ತು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಚಾಲನೆ ನೀಡಿದರು. ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ…

ವಿದ್ಯಾರ್ಥಿಗೆ ಜನಿವಾರ ತಗೆಸಿದ ಮತ್ತೊಂದು ಪ್ರಕರಣ ಬಯಲಿಗೆ

ಶಿವಮೊಗ್ಗ, ಏಪ್ರಿಲ್ ೨೦ – ಬೀದರ್ ಸಿಇಟಿ ಪರಿಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತಗೆಸಿದ ಪ್ರಕರಣ ವ್ಯಾಪಕ ವಿರೋಧವಾಗುತ್ತಿರುವ ಬೆನ್ನಲ್ಲೆ ಇನ್ನೊಂದು ಪ್ರಕರಣ ಬಯಲಾಗಿದೆ. ಶಿವಮೊಗ್ಗ ಜಿಲ್ಲೆಸಾಗರ ತಾಲೂಕಿನ ಹಳೆ ಇಕ್ಕೇರಿ ಗ್ರಾಮದ ಪಾರ್ಥ ಎಸ್. ರಾವ್ ಎಂಬ ವಿದ್ಯಾರ್ಥಿ ತನ್ನ ಶಿಕ್ಷಣ ಭವಿಷ್ಯಕ್ಕಾಗಿ ಏಪ್ರಿಲ್ ೧೬ರಂದು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹಾಜರಾದರು. ಆದರೆ, ಪಾರ್ಥನು ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪಡೆಯುವಾಗ, ಭದ್ರತೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿ ಹಾಗೂ ಪರೀಕ್ಷಾ ಮೇಲ್ವಿಚಾರಕರು ಅವನ…

ರಾಜಸ್ಥಾನ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರೋಚಕ ಜಯ

ರಾಜಸ್ಥಾನ,ಏ,೧೯- ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಧಾರಣ ಮೊತ್ತದ ರನ್‌ಗಳನ್ನು ಚೇಜ್ ಮಾಡಲು ಸಾಧ್ಯವಾಗದೆ ರಾಜಾಸ್ಥಾನ್ ರಾಯಲ್ಸ್ ತಂಡ ಕೇವಲ ಎರಡು ರನ್‌ಗಳಿಂದ ಸೋತಿತು. ಲಕ್ನೋ ಕ್ಯಾಪ್ಟನ್ ರಿಷಭ್ ಪಂತ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಆರಂಭದಲ್ಲೇ ಆಘಾತಕ್ಕೆ ಒಳಗಾದರು. ಏಕೆಂದರೆ ತಂಡದ ಪರ ಆರಂಭಿಕರಾದ ಮಿಚೆಲ್ ಮಾರ್ಷ್ ಕೇವಲ ೪ ರನ್‌ಗೆ ಕ್ಯಾಚ್ ನೀಡಿದರು. ಆದರೆ ಮಾರ್ಕ್ರಾಮ್ ಉತ್ತಮ ಬ್ಯಾಟಿಂಗ್‌ನಿಂದ ೪೫ ಎಸೆತದಲ್ಲಿ ೬೬ ರನ್…

ಜನಿವಾರ ಹಾಕಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ನಿರಾಕರಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ  ಬೊಮ್ಮಾಯಿ ಆಗ್ರಹ

ಬೆಂಗಳೂರು,ಏ,19- ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ‌ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ಹಾಕಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ದೇಶದ ಸಂಸ್ಕೃತಿ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿವಿಲ್ಲದಿರುವ ಕಾಂಗ್ರೆಸ್ ಸರ್ಕಾರ ನಿಯಮಗಳ ಪಾಲನೆಯ ಹೆಸರಿನಲ್ಲಿ ಧರ್ಮ ದ್ರೋಹ ಮಾಡುವುದರ…

ಜಾತಿಗಣತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ನಿಖಿಲ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಏ,೧೯-ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ವರದಿ ಕುರಿತು ಚರ್ಚಿಸಲು ಈ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿಗಣತಿಗೆ ಜೆಡಿಎಸ್ ವಿರೋಧ ಮಾಡೊಲ್ಲ. ಆದರೆ ಸಮೀಕ್ಷೆ ಮಾಡಿರೋ ವ್ಯವಸ್ಥೆ ಸರಿಯಿಲ್ಲ. ಹೀಗಾಗಿ ವರದಿ ಪುನರ್ ಪರಿಶೀಲನೆ ಆಗಬೇಕು. ಕೂಡಲೇ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ವರದಿ ಬಗ್ಗೆ ಚರ್ಚೆ ಮಾಡಬೇಕು.…

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ತುಮಕೂರು ಏ19-ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ…

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕರೈ ಮೇಲೆ ಗುಂಡಿನ ದಾಳಿ

ಬೆಂಗಳೂರು,ಏ,೧೯-ಬೆಂಗಳೂರಿನಲ್ಲಿ ಇನ್ನೂ ನಟೋರಿಯಸ್‌ಗಳ ನಡುವಿನ ಜಿದ್ದು ನಿಂತಂತೆ ಕಾಣುತ್ತಿಲ್ಲ, ಮಾಜಿ ಅಂಡರ್‌ವರ್ಲ್ಡ್ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಯುವ ಮೂಲಕ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇಂದು ಬೆಳಗಿನಜಾವ ೧-೩೦ರ ಸುಮಾರಿನಲ್ಲಿ ರಾಮನಗರ ಜಿಲ್ಲೆ ಬಿಡದಿಯ ಸಮೀಪ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡದಿದೆ. ಮುತ್ತಪ್ಪೆರೈ ಪುತ್ರ ರಿಕ್ಕಿ ರೈ ಕಾರಿನಲ್ಲಿ ಬರುವ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಆತನ ಮೇಲೆ ಮೂರು ಸುತ್ತಿನ ಗುಂಡು…

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತೆ ಮುನ್ನಲೆಗೆ ಬಂದ ಚರ್ಚೆ

ಬೆಂಗಳೂರು,ಏ,೧೯- ಈಗ ಮತ್ತೆ ದಿಡೀರ್ ಅಂತ ಕೆಪೆಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ವಿಷಯಕ್ಕೆ ಚಾಲನೆ ಸಿಕ್ಕಿದೆ.ಇಬ್ಬರು ನಾಯಕರ ಎರಡು ಗಂಟೆಯ ಭೇಟೆ ಇದಕ್ಕೆ ಮುನ್ನುಡಿ ಬರೆದಂತೆ ಕಾಣುತ್ತಿದೆ. ಹೌದು ಶುಕ್ರವಾರ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸಂಜಯನಗರ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಪರಸ್ಪರ ನಡೆಸಿದ ಚರ್ಚೆ ಈಗ ಮತ್ತೆ ಕೆಪಿಸಿಸಿ ಗಾದಿಯ ಚರ್ಚೆಗೆ ಮುನ್ನಡುಗಿ ಬರೆದಂತಾಗಿದೆ, ಹಿಂದುಳಿವ ಸಮುದಾಯದ ಈ ನಾಯಕರು…

ಅಖಿಲಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ಆಯ್ಕೆ

ಹುಬ್ಬಳ್ಳಿ, ಏ,18-ಮಹತ್ವದ ಬೆಳವಣಿಗೆಯಲ್ಲಿ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಯ್ಕೆಯಾಗಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಶಪ್ಪನವರ್ ಪೀಠದಿಂದ ಕೆಳಗಿಳಿಸಿ ಬೇರೆಯವರನ್ನು ನೇಮಿಸುವ ಬಗ್ಗೆಯೂ ಕಿಡಿಕಾರಿದ್ದರು.. ಬಿಜೆಪಿಯಿಂದ ಉಚ್ಚಾಟಿತ ಬಸವನಗೌಡ ಪಾಟೀಲ್ ಯತ್ನಾಳ್ ಪರ ನಿಂತಿದ್ದ ಜಯಮೃತ್ಯಂಜಯ ಸ್ವಾಮೀಜಿ ಬಗ್ಗೆ ಎಚ್ಚರಿಕೆಯೂ ನೀಡಿದ್ದರು ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಹುಬ್ಬಳ್ಳಿಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತಾಗಿ ನಡೆದ ಸಭೆಯಲ್ಲಿ ಟ್ರಸ್ಟ್​ ಪದಾಧಿಕಾರಿಗಳಿಂದ ಕಾಶಪ್ಪನವರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯು…

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.18-“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ…

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು ಏ 18-ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ…

ಇನ್ನು 3 ವರ್ಷ ಹೋರಾಟದ ಪರ್ವ: ವಿಜಯೇಂದ್ರ

ಕಲಬುರ್ಗಿ,ಏ,18- ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು. ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ…

ಕೇತಗಾನಹಳ್ಳಿ ಭೂ ಒತ್ತುವರಿ-ಎಚ್‌ಡಿಕೆ ಯನ್ನು ಆರೋಪಿಯನ್ನಾಗಿಸಲು ಹೈಕೋರ್ಟ್ ಆದೇಶ

ಬೆಂಗಳೂರು,ಏ,೧೮-ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರ್‌ಸ್ವಾಮಿಗೆ ಈಗ ಸಂಕಷ್ಟ ಕಾಲ ಎದುರಾದಂತೆ ಕಾಣುತ್ತಿದೆ, ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂ ಒತ್ತುವರಿ ಗೆ ಸಂಬಂಧಿಸಿದಂತೆ ಕುಮಾರಸೌಆಮಿಯನ್ನುಆರೋಪಿಯನ್ನಾಗಿಸಿ ಅರ್ಜಿಗೆ ಸೂಕ್ತ ತಿದ್ದುಪಡಿ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಭೂ ಒತ್ತುವರಿಗೆ ಸಂಬಂಧಿಸಿದಂತೆ ಸಮಾಜ ಪರಿವರ್ತನಾ ಸಮುದಾಯ ನಿಂದನೆ ಅರ್ಜಿಯನ್ನು ದಾಖಲಿಸಿದ್ದು ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಕೆ ವೆಂಕಟೇಶ್ ನಾಯ್ಕ್ ಅವರ ವಿಭಾಗೀಯ ಪೀಠವು…

Girl in a jacket