Girl in a jacket

Author kendhooli_editor

ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಅ, 13- ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ ಯು.ಟಿ.ಖಾದರ್

ಬೆಂಗಳೂರು, ಅ,13-68ನೇ ಅಂತರರಾಷ್ಟ್ರೀಯ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‌ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಗೌರವಾನ್ವಿತ ಅಧ್ಯಕ್ಷ ಬಸವರಾಜ ಹೊರಟ್ಟಿ ಮತ್ತು ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು. ಬಾರ್ಬಡೋಸ್ ಸಂಸತ್ತಿನ ಸಭಾಧ್ಯಕ್ಷರ ಪೀಠವು ಭಾರತದಿಂದ ಕೊಡಲ್ಪಟ್ಟಿದೆ. ಇದು ಭಾರತ ಮತ್ತು ಬಾರ್ಬಡೋಸ್ ನಡುವಿನ ಸ್ನೇಹ ಮತ್ತು ಸಂಸತ್ತೀಯ ಸಹಕಾರದ ಸಂಕೇತವಾಗಿದೆ. ಈ ಸಮ್ಮೇಳನವು ಬಾರ್ಬಡೋಸ್ ಶಾಸನಾಂಗದ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಅಂತರ-ಸಂಸದೀಯ…

ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ,11- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. ಬೆಂಗಳೂರು…

ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಅ 11-ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ.‌ ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ ಹಾಗೂ…

ರಾಜ್ಯ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು, ಅ, 08-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ…

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು ಅ 8-ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ…

ರೈತರ ಬೆಳೆಗೆ ಬೆಂಬಲ ಬೆಲೆ ಪ್ರಕ್ರಿಯೇ ಆರಂಭಿಸಲು ಶಿವಾನಂದ ಪಾಟೀಲ್ ಆದೇಶ

ಯಾವ ಬೆಳೆಗೆ ಎಷ್ಟು ಬೆಂಬಲ ಬೆಲೆ? ಹೆಸರುಕಾಳು – ಕ್ವಿಂಟಾಲ್‌ಗೆ 8,768 ರೂ., ಉದ್ದಿನಕಾಳು – ಕ್ವಿಂಟಾಲ್‌ಗೆ 7,800 ರೂ., ಸೂರ್ಯಕಾಂತಿ – ಕ್ವಿಂಟಾಲ್‌ಗೆ 7,721 ರೂ., ಬೆಂಗಳೂರು,ಸೆ,26-: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಆದೇಶ ಮಾಡಿದ್ದಾರೆ. ಖರೀದಿ ಏಜನ್ಸಿಗಳೊಂದಿಗೆ ಚರ್ಚೆ…

ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

ಮೈಸೂರು, ಸೆ, 22- ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ…

ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ: ಸಿ.ಎಂ

ಮೈಸೂರು ಸೆ 22- ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ…

ಮೂರು ಎಪಿಎಂಸಿಗಳಲ್ಲಿ ಸಿಎನ್‌ಜಿ ಪ್ಲಾಂಟ್‌ ತ್ಯಾಜ್ಯದಿಂದ ಉತ್ಪಾದನೆಗೆ ಕ್ರಮ -ಸಚಿವ ಶಿವಾನಂದ ಪಾಟೀಲ

ಬೆಂಗಳೂರು,ಸೆ,18-ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಎಪಿಎಂಸಿಗಳಲ್ಲಿ ತಲಾ 50 ಟಿಪಿಡಿ ಬಯೋ ಸಿಎನ್‌ಜಿ ಪ್ಲಾಂಟ್‌ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಎಪಿಎಂಸಿಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ತ್ಯಾಜ್ಯದಿಂದ ಪ್ರಕೃತಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದ್ದು, ಶೂನ್ಯ ತ್ಯಾಜ್ಯ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲು ಈ ತ್ಯಾಜ್ಯ ಬಳಕೆ ಮಾಡಿಕೊಂಡು ಬಯೋ ಸಿಎನ್‌ಜಿ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ಮೂರು ಎಪಿಎಂಸಿಗಳಲ್ಲಿ ಪ್ರತಿದಿನ 20ರಿಂದ 30…

ಸೆ.22 ರಿಂದ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ,12-ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಎಂ ಅಧಿಕೃತ ಕಚೇರಿ ಕೃಷ್ಣದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು,2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ…

ಡಾ.ವಿಷ್ಣುವರ್ಧನ್ ಮತ್ತು ಬಿ.ಸರೋಜಾ ದೇವಿ ಗೆ ಕರ್ನಾಟಕ ರತ್ನ ಘೋಷಣೆ

ಬೆಂಗಳೂರು, ಸೆ, 11-ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಮರಣೀತ್ತರ ಕರ್ನಾಟಕ ರತ್ನ ಒ್ರಶಸ್ತಿ ನೀಡಲುವಸರ್ಕಾರ ನಿರ್ದರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಲ್ಲಿ ಈ ನಿರ್ದಾರ ತಗೆದುಕೊಳ್ಳಲಾಗಿದೆ ಎಂದು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ,ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಇದೇ ವೇಳೆ ರಾಷ್ಟ್ರಕವಿ ಕುವೆಂಪು…

ದ್ವೇಷ ಭಾಷಣ ಆರೋಪ- ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು, ಸೆ,11-ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಮದ್ದೂರಿನಲ್ಲಿ ಈಚೆಗೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಗಣೇಶ ವಿಸರ್ಜನೆ ಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು. ಈ ವೇಳೆ ಸಿ.ಟಿ.ರವಿ ಭಾಷಣದಲ್ಲಿ’ ತೊಡೆ ತಟ್ಟುವುದು ಗೊತ್ತು,ತಲೆಕಡಿಯುವುದು ಗೊತ್ತು’ ಎಂದಿದ್ದರು.ಸಹಜವಾಗಿಯೇ ಪ್ರಚೋದನಾಕಾರಿ ಭಾಷಣವಾಗಿದ್ದು ಈ ಹಿನ್ನೆಲೆಯಲ್ಲಿ ಅವರ…

ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕನಕಪುರ, ಸೆ.10-ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ”…

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದತಿಗೆ ಸಿಎಂ ಸೂಚನೆ

ಬೆಂಗಳೂರು, ಸೆ,10- ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ಈಗಾಗಲೇ ಗುರುತಿಸಲಾಗಿರುವ ಅನರ್ಹ…

ವಸತಿ ಯೋಜನೆಗಳ ಫಲಾನುಭವಿಗಳಿಗೆ ಶೀಘ್ರ ಹಂಚಿಕೆಗೆ ಹುಡ್ಕೋದಿಂದ ಸಾಲ ಪಡೆಯಲು ಸಿಎಂ ಸೂಚನೆ

ಬೆಂಗಳೂರು, ಸೆ,10-ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ…

ಅಕ್ರಮ ಆಸ್ತಿ ಸಂಪಾದನೆ ಆರೋಪ- ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಸೆ,10- ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರಿವ ಲೋಕಾಯುಕ್ತ ಇಂದು ರಾಜ್ಯದ 69 ಕಡೆ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ, ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸುತ್ತಿದ್ದು ಅಪಾರ ಹಣ,ಚ್ನಾಭರಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಬೀದರ್ ಜಿಲ್ಲೆಯ 24 ಕಡೆ, ಚಿಕ್ಕಮಗಳೂರು, ಹಾಸನ, ರಾಮನಗರ, ಉಡುಪಿ ಸೇರಿದಂತೆ ಒಟ್ಟು 69 ಕಡೆ ಈ ದಾಳಿ…

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ, ಲಿಂಗಾಯತ ಎಂದೇ ಬರೆಸಲು ಮಹಾಸಭಾ ಮನವಿ

ಬೆಂಗಳೂರು, ಸೆ.7- ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಹಿಂದಿನಿಂದಲೂ ಮಹಾಸಭಾ ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ. ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು…

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ

ವಿಜಯಪುರ,ಸೆ,06-ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ…

ಇಂದು ನಾಳೆ ನಡೆಯಬೇಕಿದ್ದ ಕೆಪಿಎಸ್ ಸಿ ಪರೀಕ್ಷೆ ರದ್ದು

ಬೆಂಗಳೂರು, ಸೆ,06-ಕೆಪಿಎಸ್ ಸಿ(ಕರ್ನಾಟಕ ಲೋಕಸೇವಾ ಆಯೋಗ)ವು ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಇಂದು ಮತ್ತು ನಾಳೆ ನಿಗಧಿ ಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದು ಪಡಿಸಿದೆ. ಆಯೋಗದ ಅಧಿಸೂಚನೆ ಸಂಖ್ಯೆ ಪಿಎಸ್ಸಿ 1 ಆರ್ಟಿಬಿ-4/2024 ದಿನಾಂಕ 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹುದ್ದೆಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ 231…

1 2 3 124
Girl in a jacket