ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರಿಂದ ಕೇಂದ್ರದ ವಿರುದ್ಧ ಹೋರಾಟ: ವಿಜಯೇಂದ್ರ
ಬೆಳಗಾವಿ,ಏ,16- ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ…