ಕೆರೆ ಒತ್ತುವರಿ ತೆರವುಗೊಳಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ
ಬೆಂಗಳೂರು,ಮೇ,30-ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ವಿಧಾನಸೌಧದಲ್ಲಿ ನಡೆದ ಡಿಸಿ ಮತ್ತು ಸಿಇಓ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ…