ಮೀರ್ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಅಶೋಕ ಆಕ್ರೋಶ
ಮೀರ್ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಅಶೋಕ ಆಕ್ರೋಶ ಬೆಂಗಳೂರು, ಫೆ, 27-ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಮೀರ್ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಕನ್ನಡಿಗರ ಹಿತವನ್ನು…