ರಾಜ್ಯದಲ್ಲಿ ಭಾರಿ ಮಳೆ ಸೂಚನೆ- ೭ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು,ಮೇ, ೧೫ : ಕರ್ನಾಟಕಕ್ಕೆ ತೌಕ್ತೆ ಚಂಡಮಾರುತ ಆಗಮಿಸುವ ಹಿನ್ನೆಲೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಇಂದಿನಿಂದ ಮೇ ೧೭ ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿರು ಕಾರಣ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು, ಮಿಂಚು ಸಹಿತ ಮಳೆ…