ಮೃತ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದು ಒತ್ತಾಯ
ಬೆಂಗಳೂರು,ಮೇ,೨೯: ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿದ ಆಧಾರದ ಮೆಲೆ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ನಿಧನ ಹೊಂದಿದೆ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕೊರೊನಾ ವಾರಿಯರ್ಸ್ಗೆ ಬಾಕಿ ಉಳಿಸಿಕೊಂಡಿರುವ ವೇತನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಕೊರೋನ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ…