ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ : ಸಿ.ಎಂ*
ಬೆಂಗಳೂರು ಮೇ 27: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ…