Girl in a jacket

Author kendhooli_editor

ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ,ಮೋದಿಯಿಂದಲೇ ಅಡಿಗಲ್ಲು-ಎಚ್.ಡಿ.ಕೆ.

ನವದೆಹಲಿ ,ಮೇ.೨೪- ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮತ್ತೇ ಜೀವಬಂದಿದೆ,ಕೇಂದ್ರ ಸರ್ಕಾರ ಈ ಕುರಿತು ಶೀಘ್ರ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಿದೆ. ನವದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಶೀಘ್ರ ಭದ್ರವಾತಿಯಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನ ಪ್ರಯತ್ನ ನಡೆಯುತ್ತಿದ್ದು ಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದಿದ್ದಾರೆ ಈ…

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ : ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು, ಮೇ 22-“ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ ಇದು…

ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಸಂಪುಟ ಸಭೆಗೆ ಕಡತ ಮಂಡಿಸಲು ಸೂಚನೆ

ಬೆಂಗಳೂರುಮೇ,22- ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ ಸಭೆಗೆ ಮಂಡಿಸಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. 2023-24ರ ಬಜೆಟ್ ನಲ್ಲಿ ಘೋಷಿಸಿದ್ದ ಚಿಕ್ಕಮಗಳೂರು ಮತ್ತು ಕೊಡಗು ಏರ್-ಸ್ಟ್ರಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಅವರು ಮತ್ತು ಇಂಧನ…

ರೈತನಿಂದಲೇ ನಿರ್ಮಾಣವಾಗಿದೆ ರೈತನ ಬದುಕು ಬವಣೆ ತಿಳಿಸುವ “ಅಥಣಿ” ಚಿತ್ರ.

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. “ಅಥಣಿ” ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಲಾಗಿದೆ. “ಅಥಣಿ” ಒಂದು ಊರಿನ ಹೆಸರು. ಎಲ್ಲಾ ಊರುಗಳಲ್ಲಿ ಕೃಷಿಕ…

ಡೆಂಗ್ಯೂ ನಿಯಂತ್ರಣಕ್ಕೆ  240 ಆರೋಗ್ಯ ನಿರೀಕ್ಷಣಾಧಿಕಾರಿಗಳ ನೇಮಿಸಲಾಗಿದೆ – ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,21-ಡೆಂಗ್ಯೂ ತಡೆಗಟ್ಟಲು ಈ ಬಾರಿ ಬೆಂಗಳೂರಿನಲ್ಲಿ ಹೆಚ್ವಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನ ನೇಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿಯೇ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.‌ ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ…

ರಾಜಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಮೇ,21-ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ…

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ.ಸಲೀಂ ನೇಮಕ

ಬೆಂಗಳೂರು, ಮೇ, 21- ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 21-“ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದರು. ಬೆಂಗಳೂರು ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. ನಂತರ ಮಾಧ್ಯಮಗೋಷ್ಠಿ ಹಾಗೂ ಮಾಧ್ಯಮ ಪ್ರತಿಕ್ರಿಯೆ ನೀಡಿ…

ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಿ-ಅಶೋಕ್ ಒತ್ತಾಯ

ಬೆಂಗಳೂರು, ಮೇ 21-ಜನರ ಮೇಲೆ ತೆರಿಗೆ ಭಾರ ಹೊರೆಸಿರುವ ಕಾಂಗ್ರೆಸ್‌ ಸರ್ಕಾರಕ್ಕೆ ʼದಿವಾಳಿ ಮಾಡಲ್‌ ಆಫ್‌ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಆರ್ಮಿ ಜನರಲ್‌ ಆಸಿಫ್‌ ಮುನೀರ್‌ಗೆ ಫೀಲ್ಡ್‌ ಮಾರ್ಷಲ್‌ ಬಿರುದು ನೀಡಿದಂತೆಯೇ, ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ʼದಿವಾಳಿ ಮಾಡಲ್‌ ಆಫ್‌ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಜನರು ತೆರಿಗೆ ಭಾರವನ್ನು…

ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ: ಕೆ.ವಿ.ಪ್ರಭಾಕರ್ ಸಂತಸ

ಬೆಂಗಳೂರು ಮೇ 21- ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಮೌಲ್ಯವನ್ನು ಮತ್ತು…

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಮೇ21-ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ…

ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ-ಅಶೋಕ್ ವ್ಯಂಗ್ಯ

ಬೆಂಗಳೂರು, ಮೇ 20-ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು…

ಭೂಯೋಜನೆ ಆರನೇ ಗ್ಯಾರಂಟಿ- ರಾಹುಲ್ ಗಾಂಧಿ

ಹೊಸಪೇಟೆ, ಮೇ-20-ಕರ್ನಾಟಕ ಸರ್ಕಾರ ಯಶಸ್ವಿಯಾಗಿ ಎರಡು ವರ್ಷವನ್ನು ಪೂರೈಸಿದೆ. ನಮ್ಮ ಕಾಂಗ್ರೆಸ್ ಸರ್ಕಾರ ನಿಮ್ಮ ಹಣವನ್ನು ಮರಳಿ ನಿಮಗೆ ನೀಡುತ್ತಿದೆ. ನೀವು ಕಟ್ಟುವ ತೆರಿಗೆಯ ಹಣ ಮರಳಿ ನಿಮಗೆ ಸೇರಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಅದು ಯಶಸ್ವಿಯಾಗಿ ಈಡೇರಿದೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ನಂತರ ಈ ವಿಚಾರವಾಗಿ ಚರ್ಚೆ ಮಾಡುವ ವೇಳೆ ಕರ್ನಾಟಕದ ಜನರ ಭೂ ಮಾಲಿಕತ್ವದ ಬಗ್ಗೆ ಮಾತನಾಡಿದೆ. ಇಲ್ಲಿ ಹೆಚ್ಚು ಜನ ಭೂಮಿ ಹೊಂದಿದ್ದಾರೆ. ಆದರೆ ಮಾಲಿಕತ್ವ ಹೊಂದಿಲ್ಲ ಎಂಬುದು ನನಗೆ…

ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ-ಡಿಕೆಶಿ

ವಿಜಯನಗರ, ಮೇ 20-ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.…

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಹೊಸಪೇಟೆ ಮೇ 20-ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165…

ರಾಜ್ಯಾದ್ಯಂತ ಭಾರಿ ಮಳೆ,ಬೆಂಗಳೂರಿನಲ್ಲಿ ಸುರಿದ ಮಳೆಗೆ ಇಬ್ಬರು ಬಲಿ

ಬೆಂಗಳೂರು, ಮೇ20-ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು,ಬೆಂಗಳೂರಿನಲ್ಲಿ ಸುರಿದ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. 2011ರ ನಂತರ ಸುರಿದ ದಾಖಲೆ ಮಳೆ ಇದಾಗಿದ್ದು ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಹಲವು ಪ್ರದೇಶಗಳು ಅಪಾರ್ಟ್‌ಮೆಂಟ್ ಬೇಸ್‌ಮೆಂಟ್ ಸೇರಿದಂತೆ, ತಗ್ಗು ಪ್ರದೇಶ ಜಲಾವೃತಗೊಂಡಿದೆ. ಇದರಂತೆ ಭಾರಿ ಮಳೆಯಿಂದ ಎನ್ ಎಸ್ ಪಾಳ್ಯದ ಮಧುವನ್ ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಲ್ಲಿ ನೀರು ತುಂಬಿಕೊಂಡಿದೆ.ನೋಡ ನೋಡುತ್ತಿದ್ದಂತೆ ಮಳೆ ನೀರು ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್ ಆವರಿಸಿಕೊಂಡಿದೆ. ಬೇಸ್‌ಮೆಂಟ್‌ನಲ್ಲಿ ನೀರು…

ಬೆಂಗಳೂರು ಮಳೆ ಅವಾಂತರ ಪ್ರದೇಶದಲ್ಲಿ ಪರಿಹಾರ ಕಾರ್ಯನಡೆಯುತ್ತಿದೆ- ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ,19-ನಗರದಲ್ಲಿ ಸುರಿದಿರುವ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಬಂಧಿಸಿದಂತೆ ಕಾಳಜಿ ವಹಿಸಿದ್ದು ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು ಮಳೆ ಅವಾಂತರದ ಪ್ರದೇಶದಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಳೆ ಅವಾಂತರವಾಗಿದ್ದರೂ, ಸಾಧನಾ ಸಮಾವೇಶಕ್ಕಾಗಿ ಹೊಸಪೇಟೆಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಸಂಭವಿಸಿರುವ ಅವಾಂತರದ ಬಗ್ಗೆ ಸಂಬಂಧಿತ ಅಧಿಕಾರಗಳ ಜೊತೆ ಸಂಪರ್ಕದಲ್ಲಿದ್ದೇನೆ. ನಿಕಟ ನಿಗಾ ವಹಿಸಿದ್ದೇನೆ…

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು- ಅಶೋಕ್‌ ಟೀಕೆ

ಬೆಂಗಳೂರು,ಮೇ,19-  ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು…

ಪಾಕ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ ದಾಳಿಯ ಸಂಚುಕೋರನ ಹತ್ಯೆ

ಇಸ್ಲಾಮಾಬಾದ್,ಮೇ,೧೮-ಮೋಸ್ಟ್ ವಾಂಟೆಂಡ್ ಭಯೋತ್ಪಾದಕ ಭಾರತದ ಮೂರು ಪ್ರಮುಖ ದಾಳಿಯ ಸಂಚುಕೋರ ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರನನ್ನು ಭಾನುವಾರ ಹತ್ಯೆ ಮಾಡಲಾಗಿದೆ. ಸಿಂದ್ ಪ್ರಾಂತ್ಯದಲ್ಲಿ ಬಾದಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.ಸೈಫುಲ್ಲಾ ಅಲಿಯಾಸ್ ವಿನೋದ್ ಕುಮಾರ್ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಖಾಲಿದ್ ಅಲಿಯಾಸ್ ವನಿಯಾಲ್ ಅಲಿಯಾಸ್ ವಾಜಿದ್ ಅಲಿಯಾಸ್ ಸಲೀಂ ಭಾಯ್ ಹೆಸರುಗಳಿಂದ ಮೋಸ್ಟ್ ವಾಂಟೆಡ್ ಆಗಿದ್ದ ಈ ಉಗ್ರನನ್ನು ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ೨೦೦೧ ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್…

ಅರಣ್ಯ ರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದು: ಈಶ್ವರ ಖಂಡ್ರೆ

ಹೆಮ್ಮಡಗಾ (ಖಾನಾಪುರ), ಮೇ 17-ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ ವಲಯದ ತಳೇವಾಡಿ (ಗೌವಳಿ) ಗ್ರಾಮದಿಂದ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಗೆ ಬರಲು ಇಚ್ಛಿಸಿರುವ 27 ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಜೊತೆಗೆ ಅರಣ್ಯವಾಸಿಗಳೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು. ಮಾನವನ ಹಸ್ತಕ್ಷೇಪ ಇಲ್ಲದಿದ್ದರೆ ಅರಣ್ಯ…

1 11 12 13 14 15 120
Girl in a jacket