ಹೆತ್ತವರ ಕಳೆದುಕೊಂಡ ಅನಾಥಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದ ಜೊಲ್ಲೆ
ಬೆಂಗಳೂರು,ಜೂಂ3: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವಿಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ…