ಸಾಮೂಹಿಕ ಅತ್ಯಾಚಾರ;ನಾಲ್ವರ ಬಂಧನ
ಬೆಂಗಳೂರುಮೇ,28: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದೋಯ್ ಬಾಬು ಮತ್ತು ಹಕೀಲ್ ಎಂದು ಗುರ್ತಿಸಲಾಗಿದೆ. ಘಟನೆ ಬಳಿಕ ಜೀವ ಭಯದಿಂದ ಯುವತಿ ಅಜ್ಞಾತವಾಗಿದ್ದಾಳೆಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಹಲವು ವರ್ಷಗಳಿಂದ ಅಕ್ರಮವಾಗಿ ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅಲ್ಲದೆ, ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ ಹಣವನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದಾಳೆ.…