ಭಾರತ ರತ್ನ ಸಿ.ಎನ್.ಆರ್.ರಾವ್ ಗೆ ಇನಿ ಅಂತರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು,ಮೇ,28:ಭಾರತ ರತ್ನ ಖ್ಯಾತ ವಿಜ್ಞಾನಿ ಸಿ.ಎನ್.ಆರ್,ರಾವ್ ಅವರಿಗೆ ‘ಇನಿ’ ಅಂತರಾಷ್ಟ್ರೀಯ ಪ್ರಶಸ್ತಿ ದೊರಕಿದೆ. ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಶೇಖರಣೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ನ ಮಹತ್ವದ ಸಾಧನೆಗೆ ಈ ಪ್ರಶಸ್ತಿ ಗೆ ಪಾತ್ರರಾಗಿದ್ದಾರೆ ಎಂದು ಜವಾ ಹರ್ ಲಾಲ್ ನೆಹರೂ ವೈಜ್ಞಾನಿಕ ಸಂಶೋ ಧನಾ ಕೇಂದ್ರದ ಪ್ರಕಟಣೆ ತಿಳಿಸಿದೆ. ಈ ಪ್ರಶಸ್ತಿ ಇಂಧನ ಕೇಂದ್ರದ ಮುಂಚೂಣಿ ಮತ್ತು ಅತ್ಯುನ್ನತ ಪ್ರಶಸ್ತಿಯಾಗಿದ್ದು, ಇಂಧನ ಸಂಶೋ ಧನೆಯ ನೋಬೆಲ್ ಪ್ರಶಸ್ತಿ ಎಂದೇ ಪರಿಗಣಿಸಲಾಗುತ್ತದೆ. ಪ್ರೊ.ರಾವ್ ಅವರು ಜಲಜನಕ ಆಧಾರಿತ…




















