ಹಗಲು-ರಾತ್ರಿ ಪಿಂಕ್ ಪಂದ್ಯ ಆಡಲಿದ್ದಾರೆ ಮಹಿಳಾ ಕ್ರಿಕೆಟಿಗರು
ಕೋಲ್ಕೊತ್ತಾ,ಮೇ,೨೦: ಇದೇ ಮೊದಲ ಬಾರಿಗೆ ಭಾರತ ಮಹಿಳಾ ಕ್ರಿಕೇಟಿಗರು ಹಗಲು-ರಾತ್ರಿ ಪಿಂಕ್ ಬಾಲ್ ಕ್ರಿಕೆಟ್ ಆಡಲಿದ್ದಾರೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ ಇಂತಹ ಮಹತ್ವದ ನಿರ್ಧಾರವನ್ನು ತಗೆದುಕೊಂಡಿದೆ ಈ ಕುರಿತಂತೆ ಟ್ವೀಟ್ ಮಾಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಇದೇ ವರ್ಷಾಂತ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವನಿತೆಯರು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ ವೇಳೆ ಅವರು ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಬಾರಿಗೆ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಕ್ರಿಕೆಟ್ ಆಡಲಿದ್ದಾರೆ. ಭಾರತೀಯ ಮಹಿಳಾ ಕ್ರಿಕೆಟ್…