ಜನಾರ್ಧನ ರೆಡ್ಡಿ ಬಳ್ಳಾರಿ ಭೇಟಿಗೆ ಮನವಿ ಅರ್ಜಿ ವಿಚಾರಣೆಗೆ ಒಪ್ಪಿಗೆ ನೀಡಿದ ಸುಪ್ರೀಂ
ನವದೆಹಲಿ,ಮೇ,೨೪: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ಹೋಗಲು ಅವಕಾಶಕ್ಕೆ ಸಲ್ಲಿಸಲಾದ ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಒಪ್ಪಿಗೆ ನೀಡಿದೆ. ಬಹು ಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ರೆಡ್ಡಿ ಅವರು ೨೦೧೫ ರಿಂದ ಜಾಮೀನಿನ ಮೇಲೆ ಜೈಲಿಂದ ಹೊರಗಿದ್ದಾರೆ. ಆದರೆ ಅವರಿಗೆ ಬಳ್ಲಾರಿಗೆ ಭೇಟಿ ಕೊಡುವುದನ್ನು ಹಾಗೇ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಾ ಭೇಟಿಗೆ ನಿಷೇಧಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಸುಪ್ರೀಂ…



















