ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಕಾರಣ- ಈಶ್ವರಪ್ಪ ಆರೋಪ
ಶಿವಮೊಗ್ಗ, ಮೇ 22: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದು ಈ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. ಸಚಿವ ಕೆ.ಎಸ್ ಈಶ್ವರಪ್ಪ ಅವರು ಎರಡು ಅಂಶಗಳನ್ನು ಒಳಗೊಂಡ ಪತ್ರ ಬರೆದಿದ್ದು, ಇದರಲ್ಲಿ ಪ್ರಮುಖವಾಗಿ ಕೋವಿಡ್ ಲಸಿಕೆ ಮತ್ತು ಅದರ ನಿರ್ವಹಣೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ವಿಷಯ 1: ಬಿಜೆಪಿಗೊಂದು, ಕಾಂಗ್ರೆಸ್ಗೊಂದು ಸಂವಿಧಾನವಾ? ಕೋವಿಡ್ ಸಂಬಂಧ ಸಭೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ…




















