ಆರ್ ಸಿ.ಬಿ ಸಂಭ್ರಮಾಚರಣೆ ದುರಂತ ಮರೆಮಾಚಲು ಮರು ಜಾತಿ ಸಮೀಕ್ಷೆ ನಾಟಕ- ಅಶೋಕ್ ಆರೋಪ
ಬೆಂಗಳೂರು, ಜೂ,11-ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯನ್ನು ಮರೆ ಮಾಚಲು ಜಾತಿ ಗಣತಿ ಮರು ಸಮೀಕ್ಷೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಿಮಗೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಿ. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿ. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು…
                                        


















