ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್.ಅಶೋಕ
ಬೆಂಗಳೂರು, ಆ, 2-ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕರೆ ನೀಡಿದರು. ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಅಂದರೆ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ. ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್.ಎಂ.ಕೃಷ್ಣ,…