ರಾಜ್ಯಾದ್ಯಂತ ಭಾರಿ ಮಳೆ,ಬೆಂಗಳೂರಿನಲ್ಲಿ ಸುರಿದ ಮಳೆಗೆ ಇಬ್ಬರು ಬಲಿ
ಬೆಂಗಳೂರು, ಮೇ20-ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು,ಬೆಂಗಳೂರಿನಲ್ಲಿ ಸುರಿದ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. 2011ರ ನಂತರ ಸುರಿದ ದಾಖಲೆ ಮಳೆ ಇದಾಗಿದ್ದು ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಹಲವು ಪ್ರದೇಶಗಳು ಅಪಾರ್ಟ್‌ಮೆಂಟ್ ಬೇಸ್‌ಮೆಂಟ್ ಸೇರಿದಂತೆ, ತಗ್ಗು ಪ್ರದೇಶ ಜಲಾವೃತಗೊಂಡಿದೆ. ಇದರಂತೆ ಭಾರಿ ಮಳೆಯಿಂದ ಎನ್ ಎಸ್ ಪಾಳ್ಯದ ಮಧುವನ್ ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಲ್ಲಿ ನೀರು ತುಂಬಿಕೊಂಡಿದೆ.ನೋಡ ನೋಡುತ್ತಿದ್ದಂತೆ ಮಳೆ ನೀರು ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್ ಆವರಿಸಿಕೊಂಡಿದೆ. ಬೇಸ್‌ಮೆಂಟ್‌ನಲ್ಲಿ ನೀರು…