ಅನಿಲ್ ಕುಂಬ್ಳೆ – ಅರಣ್ಯ ಇಲಾಖೆ ರಾಯಭಾರಿ: ಈಶ್ವರ ಖಂಡ್ರೆ
ಬೆಂಗಳೂರು, ಮೇ 27- ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ…