ಖ್ಯಾತ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ನಿಧನ
ಬೆಂಗಳೂರು, ಮೇ,30-ಕನ್ನಡದ ಖ್ಯಾತ ಕವಿಎಚ್.ಎಸ್,ವೆಂಕಟೇಶ್ ಮೂರ್ತಿ ಅವರು ಇಂದು ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರಿಗೆ80 ವರ್ಷ ವಯಸ್ಸಾಗಿತ್ತು,ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯಿಸಿರೆಳದರು. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್‌ಎಸ್‌ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ,…