ಬೆಂಬಲ ಬೆಲೆಯಲ್ಲಿ ಶೀಘ್ರ ಹಿಂಗಾರು ಸೂರ್ಯಕಾಂತಿ ಖರೀದಿ: ಶಿವಾನಂದ ಪಾಟೀಲ
ಬೆಂಗಳೂರು,ಮೇ,16-ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಕೇಂದ್ರ ಸರ್ಕಾರ ನಾಫೆಡ್ ಹಾಗೂ ಎನ್ ಸಿ ಸಿ ಎಫ್…