ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ.ಸಲೀಂ ನೇಮಕ
ಬೆಂಗಳೂರು, ಮೇ, 21- ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…