ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, ಜೂ.1- ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ, ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ…




















