ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಆ, 8-ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಪ್ಪಳ ಕಾರ್ಯಕ್ರಮ ಇಂದು ಮಳೆ ಕಾರಣದಿಂದ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು. ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ…